ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಸಂಬಂಧ ಇಂದು ಮಾಧ್ಯಮಗೋಷ್ಠಿ ನಡೆಸಿದ ಈಶ್ವರಪ್ಪ ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು.
ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಸಿಎಂ ಭೇಟಿ ಮಾಡಿ ನಂತರ ರಾಜೀನಾಮೆ ಸಲ್ಲಿಸುತ್ತೇನೆ. ನನಗೆ ದೇವರ ಮೇಲೆ ನಂಬಿಕೆ ಇದೆ. ಈ ಪ್ರಕರಣದಿಂದ ಹೊರ ಬಂದೇ ಬರುತ್ತೇನೆ ಎಂದು ಅವರು ತಿಳಿಸಿದರು.
ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ನಡೆದ ನಂತರ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಪಟ್ಟು ಹಿಡಿದಿತ್ತು. ಅಷ್ಟೇ ಅಲ್ಲದೇ ದೇಶದೆಲ್ಲೆಡೆ ಈ ಬಗ್ಗೆ ಚರ್ಚೆಯೂ ಆಗಿತ್ತು.
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
إرسال تعليق