ಮಂಗಳೂರು ವಿವಿ: ಎ.23ರಂದು 40ನೇ ಘಟಿಕೋತ್ಸವ

Upayuktha
0

 


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 40 ನೇ ವಾರ್ಷಿಕ ಘಟಿಕೋತ್ಸವವನ್ನು ಮಂಗಳಗಂಗೋತ್ರಿಯ ʼಮಂಗಳಾ ಸಭಾಂಗಣʼದಲ್ಲಿ ಎಪ್ರಿಲ್ 23 (ಶನಿವಾರ) ರಂದು ಪೂರ್ವಾಹ್ನ 11 ಗಂಟೆಗೆ ನಡೆಸಲು ನಿಶ್ಚಯಿಸಲಾಗಿದೆ. 


ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶ ಜಸ್ಟೀಸ್ ಎಸ್. ಅಬ್ದುಲ್ ನಝೀರ್ ಮುಖ್ಯ ಅತಿಥಿಯಾಗಿ ಘಟಿಕೋತ್ಸವ ಭಾಷಣ ನೆರವೇರಿಸಲಿದ್ದಾರೆ. ಕರ್ನಾಟಕದ ರಾಜ್ಯಪಾಲ ಮತ್ತು ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.


ಉನ್ನತ ಶಿಕ್ಷಣ ಸಚಿವ ಹಾಗೂ ಇಲೆಕ್ಟ್ರಾನಿಕ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳ ಸಚಿವರೂ ಆಗಿರುವ ಡಾ. ಅಶ್ವತ್ಥ್ ನಾರಾಯಣ್ ಸಿ. ಎನ್, ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಮೊದಲಾದವರು ಉಪಸ್ಥಿತರಿರಲಿದ್ದಾರೆ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ. 

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top