|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಿಟ್ಟೆ ಹಾಗೂ ಅಕ್ರೇಟ್ ಜಿಯೋ ಸಂಸ್ಥೆಯ ನಡುವೆ ಒಪ್ಪಂದ

ನಿಟ್ಟೆ ಹಾಗೂ ಅಕ್ರೇಟ್ ಜಿಯೋ ಸಂಸ್ಥೆಯ ನಡುವೆ ಒಪ್ಪಂದ


ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಚಿಕ್ಕಮಗಳೂರಿನ ಅಕ್ರೇಟ್ ಜಿಯೋ ಪ್ರೈ.ಲಿ ನಡುವಿನ ಶೈಕ್ಷಣಿಕ ಒಪ್ಪಂದಕ್ಕೆ ಸಹಿ ಹಾಗೂ ಹಸ್ತಾಂತರ ಕಾರ್ಯಕ್ರಮವು ಏ.13 ರಂದು ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ನಡೆಯಿತು. ಒಪ್ಪಂದದ ಪ್ರಮಾಣಪತ್ರಕ್ಕೆ ನಿಟ್ಟೆ ಸಂಸ್ಥೆಯ ವತಿಯಿಂದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ| ನಿರಂಜನ್ ಎನ್.ಚಿಪ್ಳೂಣ್ಕರ್ ಹಾಗೂ ಅಕ್ರೇಟ್ ಜಿಯೋ ವತಿಯಿಂದ ಸಂಸ್ಥೆಯ ನಿರ್ದೇಶಕ ಮೋಹನ್ ಕುಮಾರ್ ಎಸ್. ಸಹಿ ಹಾಕಿದರು.


ಈ ಸಂದರ್ಭದಲ್ಲಿ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲರಾದ ಡಾ| ಐ ರಮೇಶ್ ಮಿತ್ತಂತಾಯ, ಡಾ| ಶ್ರೀನಿವಾಸ ರಾವ್ ಬಿ.ಆರ್, ಸಿವಿಲ್ ವಿಭಾಗದ ಪ್ರಾಧ್ಯಾಪಕರು ಹಾಗೂ ಅಕ್ರೇಟ್ ಜಿಯೋ ಸಂಸ್ಥೆಯ ತಾಂತ್ರಿಕ ಸಹಾಯಕ ಡಾ| ಹರೀಶ್ ಕುಮಾರ್ ಎಸ್ ಉಪಸ್ಥಿತರಿದ್ದರು. ಈ ಒಪ್ಪಂದದ ಪ್ರಕಾರ ಅಕ್ರೇಟ್ ಜಿಯೋ ಸಂಸ್ಥೆಯು ನಿಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ರಿಮೋಟ್ ಸೆನ್ಸಿಂಗ್ ಹಾಗೂ ಜಿ.ಐ.ಎಸ್ ತಂತ್ರಜ್ಞಾನ ಕ್ಷೇತ್ರಗಳಲ್ಲಿನ ಬೆಳವಣಿಗೆಯ ಬಗೆಗಿನ ಮಾಹಿತಿ, ತರಬೇತಿ ಹಾಗೂ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲು ಸಹಕಾರಿಯಾಗಲಿದೆ.


ಸಿವಿಲ್ ವಿಭಾಗದ ಮುಖ್ಯಸ್ಥ ಡಾ| ಅರುಣ್ ಕುಮಾರ್ ಸ್ವಾಗತಿಸಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಡಾ| ಭೋಜರಾಜ್ ಕಾರ್ಯಕ್ರಮ ಸಂಯೋಜಿಸುವುದರೊಂದಿಗೆ ಸಹಕರಿಸಿದವರಿಗೆ ವಂದಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 تعليقات

إرسال تعليق

Post a Comment (0)

أحدث أقدم