|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಏಕಕಾಲದಲ್ಲಿ 77 ಸಾವಿರ ತ್ರಿವರ್ಣ ಧ್ವಜ ಹಾರಿಸಿ ಭಾರತ ದಾಖಲೆ

ಏಕಕಾಲದಲ್ಲಿ 77 ಸಾವಿರ ತ್ರಿವರ್ಣ ಧ್ವಜ ಹಾರಿಸಿ ಭಾರತ ದಾಖಲೆ

ಬಿಹಾರ:  ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಏಕಕಾಲದಲ್ಲಿ 77 ಸಾವಿರಕ್ಕೂ ಅಧಿಕ ರಾಷ್ಟ್ರಧ್ವಜಗಳ ಹಾರಾಟವಾಗಿವೆ. ಈ ಮೂಲಕ ಪಾಕಿಸ್ತಾನದ ದಾಖಲೆಯನ್ನು ಭಾರತ ಅಳಿಸಿ ಹಾಕಿದೆ. ಪಾಟ್ನಾದಲ್ಲಿ ಬಾಬು ವೀರ ಕುನ್ವರ್ ಸಿಂಗ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಇಷ್ಟೊಂದು ರಾಷ್ಟ್ರಧ್ವಜಗಳು ಏಕಕಾಲದಲ್ಲಿ ಹಾರಾಡಿದವು.




1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ವೀರ ಸೇನಾನಿ ವೀರ್​ ಕುನ್ವರ್ ಸಿಂಗ್​ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಭಾಗಿಯಾದರು. ಈ ವೇಳೆ ರಾಷ್ಟ್ರಧ್ವಜಗಳನ್ನು ಏಕಕಾಲದಲ್ಲಿ ಹಾರಿಸಿ, ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.


2004ರಲ್ಲಿ ಪಾಕಿಸ್ತಾನ ಏಕಕಾಲಕ್ಕೆ 57,632 ಧ್ವಜಗಳನ್ನು ಹಾರಿಸಿ ದಾಖಲೆ ಬರೆದಿತ್ತು. ಇದೀಗ ಆ ರೆಕಾರ್ಡ್​ ಬ್ರೇಕ್​ ಆಗಿದೆ. ವಿಜಯೋತ್ಸವ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿದರು.

0 Comments

Post a Comment

Post a Comment (0)

Previous Post Next Post