ಇಸ್ಲಾಮಾಬಾದ್: ಕಳೆದ ಕೆಲ ದಿನಗಳಿಂದ ಪಾಕಿಸ್ತಾನದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ಇದೀಗ ತೆರೆ ಬಿದ್ದಿದ್ದು, ವಿಪಕ್ಷ ಮೈತ್ರಿಕೂಟದ ಪ್ರಮುಖ ಹಾಗೂ ಪಿಎಂಎಲ್-ಎನ್ ನಾಯಕ ಶೆಹಬಾಜ್ ಷರೀಫ್ ನೂತನ ಪ್ರಧಾನಿಯಾಗಿದ್ದಾರೆ.
342 ಸದಸ್ಯ ಬಲದ ಪಾಕಿಸ್ತಾನ ಸಂಸತ್ತು 'ನ್ಯಾಷನಲ್ ಅಸೆಂಬ್ಲಿ'ಯಲ್ಲಿ ಪಿಟಿಪಿ ಪಕ್ಷದ ನಾಯಕ ಇಮ್ರಾನ್ ಖಾನ್ ವಿಶ್ವಾಸ ಮತಯಾಚನೆ ವೇಳೆ ಸೋಲು ಕಂಡಿದ್ದರು. ಹೀಗಾಗಿ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇದೀಗ 174 ಸದಸ್ಯರ ಬೆಂಬಲ ಹೊಂದಿರುವ ಶೆಹಬಾಜ್ ಷರೀಫ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ