ಪ್ರಧಾನಮಂತ್ರಿ ಸಂಗ್ರಹಾಲಯ ಉದ್ಘಾಟಿಸಿದ ಪಿಎಂ ಮೋದಿ

Upayuktha Writers
0

ನವದೆಹಲಿ: ರಾಷ್ಟ್ರ ನಿರ್ಮಾಣಕ್ಕಾಗಿ ಭಾರತದ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಯನ್ನು ಗೌರವಿಸಲು ನಿರ್ಮಿಸಲಾಗಿರುವ 'ಪ್ರಧಾನಮಂತ್ರಿ ಸಂಗ್ರಹಾಲಯ'ವನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದಾರೆ.



ಮೋದಿಯವರು ವಸ್ತು ಸಂಗ್ರಹಾಲಯದೊಳಗೆ ತೆರಳಲು  ಮೊದಲ ಟಿಕೆಟ್ ಅನ್ನು ಖರೀದಿಸಿದ್ದಾರೆ.  ಪ್ರಧಾನಮಂತ್ರಿ ಸಂಗ್ರಹಾಲಯವು ಸಿದ್ಧಾಂತ ಅಥವಾ ಅಧಿಕಾರಾವಧಿಯನ್ನು ಲೆಕ್ಕಿಸದೆ, ಸ್ವಾತಂತ್ರ್ಯದ ನಂತರ ಭಾರತದ ಪ್ರತಿಯೊಬ್ಬ ಪ್ರಧಾನಿಗೆ ಸಲ್ಲಿಸುವ ಗೌರವವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆಂದು ಪ್ರಧಾನ ಮಂತ್ರಿಗಳ ಕಚೇರಿ, ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.


ಇದು ಎಲ್ಲಾ ಭಾರತೀಯ ಪ್ರಧಾನ ಮಂತ್ರಿಗಳ ನಾಯಕತ್ವ, ದೂರದೃಷ್ಟಿ ಮತ್ತು ಸಾಧನೆಗಳ ಬಗ್ಗೆ ಯುವ ಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಪ್ರೇರೇಪಿಸುವ ಗುರಿಯನ್ನು ಹೊಂದಿದೆ. ಸಂಗ್ರಹಾಲಯದ ಕಟ್ಟಡದ ವಿನ್ಯಾಸ ಭಾರತದ ಅಭಿವೃದ್ಧಿಯ ಬೆಳವಣಿಗೆಯ ಕತೆಗಳಿಂದ ಸ್ಫೂರ್ತಿ ಪಡೆದಿದೆ. ಪ್ರಧಾನಮಂತ್ರಿ ಸಂಗ್ರಹಾಲಯದ ವೇಳೆ ಯಾವುದೇ ಮರವನ್ನು ಕಡಿಯಲಾಗಿಲ್ಲ ಅಥವಾ ಕಸಿ ಮಾಡಲಾಗಿಲ್ಲ. ಸಂಗ್ರಹಾಲಯಕ್ಕೊಂದು ಲಾಂಛನವಿದ್ದು, ರಾಷ್ಟ್ರ ಮತ್ತು ಪ್ರಜಾಪ್ರಭುತ್ವವನ್ನು ಸಂಕೇತಿಸುವ ಧರ್ಮ ಚಕ್ರವನ್ನು ಭಾರತೀಯ ನಾಗರಿಕರು ಹಿಡಿದಿರುವಂತಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top