ನವದೆಹಲಿ: ಹನುಮ ಜಯಂತಿ ಹಿನ್ನೆಲೆ ಪ್ರಧಾನಿ ಮೋದಿ ಅವರು ಗುಜರಾತ್ನ ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪ್ರಧಾನಮಂತ್ರಿ ಕಚೇರಿ, ಹನುಮಾನ್ಜಿ ಚಾರ್ಧಾಮ್ ಪ್ರಾಜೆಕ್ಟ್ನ ಅಡಿಯಲ್ಲಿ ದೇಶದ ನಾಲ್ಕು ದಿಕ್ಕುಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ನಾಲ್ಕು ಹನುಮಾನ್ ಪ್ರತಿಮೆಗಳಲ್ಲಿ ಇದು ಎರಡನೇಯದು ಎಂದು ಸ್ಪಷ್ಟಪಡಿಸಿದೆ.
ಯಾವುದೇ ಭಾಷೆ ಅಥವಾ ಉಪಭಾಷೆಯಾಗಿರಲಿ, ರಾಮ್ ಕಥಾದ ಆತ್ಮವು ಎಲ್ಲರನ್ನೂ ಒಂದುಗೂಡಿಸುತ್ತದೆ, ದೇವರ ಮೇಲಿನ ಭಕ್ತಿಯೊಂದಿಗೆ ಒಂದುಗೂಡಿಸುತ್ತದೆ. ಇದು ಭಾರತೀಯ ನಂಬಿಕೆಯ ಶಕ್ತಿ, ನಮ್ಮ ಆಧ್ಯಾತ್ಮಿಕತೆ, ನಮ್ಮ ಸಂಸ್ಕೃತಿ ಮತ್ತು ನಮ್ಮ ಸಂಪ್ರದಾಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ