'ಲತಾ ದೀನನಾಥ್ ಮಂಗೇಶ್ಕರ್' ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ

Upayuktha Writers
0

ಮುಂಬೈ: ಮುಂಬೈನಲ್ಲಿ 80ನೇ ವಾರ್ಷಿಕ 'ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ' ಪ್ರದಾನ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಮತ್ತು ಸಮಾಜಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆಗಾಗಿ ಮೊದಲ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದರು.



ಈ ವೇಳೆ ಶ್ರೇಷ್ಠ ಗಾಯಕಿಯನ್ನು ಸ್ಮರಿಸಿ ಮಾತನಾಡಿದ ಪ್ರಧಾನಿ, ಲತಾ ಮಂಗೇಶ್ಕರ್ ಅವರು ಯಾವಾಗಲೂ ಬಲಿಷ್ಠ ಮತ್ತು ಸಮೃದ್ಧ ಭಾರತದ ಕನಸು ಕಾಣುತ್ತಿದ್ದರು. ರಾಷ್ಟ್ರ ನಿರ್ಮಾಣಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.


ವರ್ಷದ ಪ್ರಾರಂಭದಲ್ಲಿ ಮುಂಬೈನಲ್ಲಿ ತಮ್ಮ 92 ನೇ ವಯಸ್ಸಿನಲ್ಲಿ ನಿಧನರಾದ ಭಾರತ ರತ್ನ ಲತಾ ಮಂಗೇಶ್ಕರ್ ಅವರ ಸ್ಮರಣೆ ಹಾಗೂ ಗೌರವಾರ್ಥವಾಗಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




hit counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top