ಉಡುಪಿ: ಅಯೋಧ್ಯೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಭೆಯು ಅಯೋಧ್ಯೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಟ್ರಸ್ಟ್‌ನ ವಿಶ್ವಸ್ಥರಾದ ಪೇಜಾವರ ಶ್ರೀ ವಿಶ್ವಸ್ಥರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಭಾಗವಹಿಸಿದರು.
ಅದಕ್ಕೂ ಮೊದಲು ತಾತ್ಕಾಲಿಕ ಮಂದಿರದಲ್ಲಿರುವ ರಾಮಲಲ್ಲಾನ ದರ್ಶನ ಪಡೆದು ಚಾಮರಸೇವೆ, ಮಂಗಳಾರತಿ ಬೆಳಗಿ ದೇಶದ ಕ್ಷೇಮ ಸುಭಿಕ್ಷೆ ಶಾಂತಿಗೆ ಪ್ರಾರ್ಥಿಸಿದರು. ಬಳಿಕ ಮಂದಿರ ನಿರ್ಮಾಣ ಸ್ಥಳಕ್ಕೆ ತೆರಳಿ ಕಾರ್ಮಿಕರೊಂದಿಗೆ ಉಭಯ ಕುಶಲೋಪರಿ ನಡೆಸಿ ಉತ್ಸಾಹ ತುಂಬಿದರು. ಮತ್ತು ನಿರ್ಮಾಣಕಾಮಗಾರಿ ನಿವೇಶನ ಪೂರ್ತಿ ಸಂಚರಿಸಿ ಅವಲೋಕಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ