ವಿವೇಕಾನಂದ ಕಾಲೇಜಿನಲ್ಲಿ ‘ಸಾರಂಗ, ನಿನ್ನ ನೆನಪಿನಲ್ಲೇ’ ಕೃತಿ ಹಾಗೂ ‘ಸಮತ್ವ’ ಸಂಶೋಧನ ಪತ್ರಿಕೆ ನಾಳೆ ಲೋಕಾರ್ಪಣೆ

Upayuktha
0



ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ವಿಶ್ರಾಂತ ಪ್ರಾಂಶುಪಾಲ ಡಾ. ಬಿ ಶ್ರೀಧರ್ ಭಟ್ ರಚಿಸಿದ 'ಸಾರಂಗ ನಿನ್ನ ನೆನಪಿನಲ್ಲೇ' ಕೃತಿ ಹಾಗೂ ವಿವೇಕಾನಂದ ಸಂಶೋಧನ ಕೇಂದ್ರದ ‘ಸಮತ್ವ’ ಸಂಶೋಧನ ಪತ್ರಿಕೆ ಏ.5ರಂದು ವಿವೇಕಾನಂದ ಕಾಲೇಜಿನಲ್ಲಿ ಬಿಡುಗಡೆಗೊಳ್ಳಲಿದೆ.


ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಹಾಗೂ ವಿದ್ವಾಂಸ ಡಾ. ಪಾದೆಕಲ್ಲು ವಿಷ್ಣು ಭಟ್ ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಮಹಾವಿದ್ಯಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ವಹಿಸಲಿದ್ದು, ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತ ಕುಮಾರ್ ಇವರು ಸಮತ್ವ ಲೋಕಾರ್ಪಣೆ ಹಾಗೂ ಆಶಯ ನುಡಿಗಳನ್ನಾಡಲಿರುವರು. ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರ ಮುರಳಿಕೃಷ್ಣ ಕೆ. ಎನ್. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

hit counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top