|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಶ್ಮೀರ: ಉಗ್ರರು ನಡೆಸಿದ ದಾಳಿಯಲ್ಲಿ ಎದೆಗೆ ಗುಂಡು ತಗುಲಿ ಯೋಧ ಹುತಾತ್ಮ

ಕಾಶ್ಮೀರ: ಉಗ್ರರು ನಡೆಸಿದ ದಾಳಿಯಲ್ಲಿ ಎದೆಗೆ ಗುಂಡು ತಗುಲಿ ಯೋಧ ಹುತಾತ್ಮ

ನವದೆಹಲಿ: ಜಮ್ಮು-ಕಾಶ್ಮೀರದ ಅನಂತನಾಗ್​ ಜಿಲ್ಲೆಯಲ್ಲಿ ಶನಿವಾರ ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಹರಿಯಾಣದ ಯೋಧ ನಿಶಾನ್​ ಸಿಂಗ್ ಹುತಾತ್ಮರಾದರು.


ಹರಿಯಾಣದ ಸಿರ್ಸಾ ಜಿಲ್ಲೆಯ ಭೌದಿನ್​ ಗ್ರಾಮದ ನಿಶಾನ್​​ ಸಿಂಗ್​ 2013ರಲ್ಲಿ ಸೇನೆಗೆ ಸೇರಿದ್ದರು. 29 ವರ್ಷದ ಈ ಯೋಧ ಕಳೆದ ಎರಡು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 



ಬೆಳಗಿನ ಜಾವ 3.15 ಸುಮಾರಿಗೆ ಅನಂತನಾಗ್​ ಜಿಲ್ಲೆಯ ವತ್ನಾರ್ ಗ್ರಾಮದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಬಂದಿದ್ದು, ತಕ್ಷಣ ಪೊಲೀಸ್​ ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. 


ಈ ವೇಳೆ ಉಗ್ರರು ನಡೆಸಿದ ದಾಳಿಯಲ್ಲಿ ಎದೆಗೆ ಗುಂಡು ತಗುಲಿ ನಿಶಾನ್​ ಸಿಂಗ್​ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು. ಶ್ರೀನಗರದಲ್ಲಿ ರವಿವಾರ ಹುತಾತ್ಮ ಯೋಧನಿಗೆ ಸೇನಾಧಿಕಾರಿಗಳು ಗೌರವ ವಂದನೆ ಸಲ್ಲಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 تعليقات

إرسال تعليق

Post a Comment (0)

أحدث أقدم