ಮಂಗಳೂರು: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಶೈಲಶ್ರೀ. ಕೆ ಅವರು ಮಂಡಿಸಿದ "ಕಾಫಿ ಪ್ಲಾಂಟೇಶನ್ ಲೇಬರರ್ಸ್: ಎ ಸೋಷಿಯೋ- ಎಕನಾಮಿಕ್ ಸ್ಟಡಿ ಇನ್ ಕೊಡಗು ಡಿಸ್ಟ್ರಿಕ್ಟ್ ಆಫ್ ಕರ್ನಾಟಕ" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಸಬಾ ಬಜಾರ್ ಗ್ರಾಮದ ಶೈಲಶ್ರೀ. ಕೆ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿಯ ಸ್ನಾತಕೋತ್ತರ ವಿಭಾಗದ ಸಂಯೋಜಕ ಹಾಗೂ ಸಹ ಪ್ರಾಧ್ಯಾಪಕ ಡಾ. ಯತೀಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದರು. ಇವರು ದಿ. ಉಮಾನಾಥ ಕೋಟ್ಯಾನ್ ಹಾಗೂ ಸುಂದರಿ ದಂಪತಿಯ ಪುತ್ರಿ ಮತ್ತು ಗುರುಚರಣ್ ಕರ್ಕೇರಾ ರವರ ಪತ್ನಿ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ