ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ನಡೆಸಿದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ (ಎಂ.ಕಾಂ) ಪರೀಕ್ಷೆಯಲ್ಲಿ ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿನಿ ಶೀತಲ್ ನಾಯಕ್ ಅವರು ಮೊದಲ ರ‍್ಯಾಂಕ್ ಹಾಗೂ ಎರಡು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.
ಪ್ರಕಾಶ್ ನಾಯಕ್ ಮತ್ತು ಗೀತಾ ನಾಯಕ್ ದಂಪತಿಗಳ ಪುತ್ರಿಯಾಗಿರುವ ಇವರು, ಪ್ರಸ್ತುತ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ