ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಉಕ್ರೇನ್‌ಗೆ ಭೇಟಿ

Upayuktha Writers
0

 

ವಾಷಿಂಗ್ಟನ್: ರಷ್ಯಾ ಮತ್ತು ಉಕ್ರೇನ್ ಯುದ್ಧ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರು ಏಪ್ರಿಲ್ 28ರಂದು ಉಕ್ರೇನ್‌ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.


ಆಂಟೋನಿಯೊ ಗುಟೆರೆಸ್ ಮುಂದಿನ ವಾರ ಉಕ್ರೇನ್‌ಗೆ ಭೇಟಿ ನೀಡಲಿದ್ದಾರೆ. ಅವರು ಉಕ್ರೇನ್​​ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರೊಂದಿಗೆ ಕಾರ್ಯಕಾರಿ ಸಭೆಯನ್ನು ನಡೆಸಲಿದ್ದಾರೆ ಮತ್ತು ಏಪ್ರಿಲ್ 28ರಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಅದರ ನಂತರ ಉಕ್ರೇನ್​ನ ನೆರವಿನ ಕುರಿತಂತೆ ಚರ್ಚಿಸಲು ಯುಎನ್ ಏಜೆನ್ಸಿಗಳ ಸಿಬ್ಬಂದಿಯನ್ನು ಭೇಟಿಯಾಗಲಿದ್ದಾರೆ ಎಂದು  ವಿಶ್ವಸಂಸ್ಥೆಯ ಪತ್ರಿಕಾ ಹೇಳಿಕೆ ತಿಳಿಸಿದೆ.






ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿ ಮಾಡಲು ಗುಟೆರಸ್ ರಷ್ಯಾಗೆ ಭೇಟಿ ನೀಡಲಿದ್ದಾರೆ ಎಂದು ಘೋಷಿಸಿದ ಕೆಲವೇ ಗಂಟೆಗಳ ನಂತರ ಉಕ್ರೇನ್​ಗೆ ಭೇಟಿ ನೀಡುವ ನಿರ್ಧಾರವನ್ನು ಘೋಷಿಸಲಾಯಿತು. ರಷ್ಯಾ ಕೂಡ ಆಂಟೋನಿಯೋ ಗುಟೆರಸ್ ಅವರ ಭೇಟಿಯನ್ನು ದೃಢಪಡಿಸಿದೆ. ಮಂಗಳವಾರವಷ್ಟೇ ಮಾತನಾಡಿದ್ದ ಗುಟೆರೆಸ್ ಅವರು ಉಕ್ರೇನ್‌ನಲ್ಲಿ ನಾಲ್ಕು ದಿನಗಳ ಕದನ ವಿರಾಮಕ್ಕೆ ಕರೆ ನೀಡಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top