ಉಜಿರೆಯಲ್ಲಿ ಏ.26ರಂದು ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ವಿಚಾರ ಸಂಕಿರಣ

Upayuktha
0

ಉಜಿರೆ: ಕರ್ನಾಟಕ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ, ಅರಣ್ಯ ಇಲಾಖೆ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಉಜಿರೆಯ ಶ್ರೀ ಸಿದ್ದವನ ಗುರುಕುಲದಲ್ಲಿ ಏಪ್ರಿಲ್ 26ರಂದು ‘ಪಶ್ಚಿಮ ಘಟ್ಟಗಳ ಸಂರಕ್ಷಣೆ, ಮಹತ್ವ, ನೇತ್ರಾವತಿ ಮತ್ತು ಇತರ ಉಪನದಿಗಳ ಪವಿತ್ರತೆ -ಪ್ರಾಮುಖ್ಯತೆ/ ಕುರಿತು ಒಂದು ದಿನದ ವಿಚಾರ ಸಂಕಿರಣ ನಡೆಯಲಿದೆ.


ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಬೆಳಿಗ್ಗೆ 10 ಗಂಟೆಗೆ ಈ ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ. ಇಂಧನ-ಕನ್ನಡ ಸಂಸ್ಕøತಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ ಬಂದರು, ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆ ವಹಿಸಲಿದ್ದಾರೆ.


ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್, ಬೋಜೆಗೌಡ, ಮಂಜುನಾಥ ಭಂಡಾರಿ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪಾವತಿ ಆರ್ ಶೆಟ್ಟಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಪ್ರೊ.ಕುಮಾರಸ್ವಾಮಿ, ಬಿ.ಜೆ.ಹೆಗ್ಡೆ ಅವರು ಈ ಸಂದರ್ಭದಲ್ಲಿ ಪಶ್ಚಿಮ ಘಟ್ಟಗಳು, ನೇತ್ರಾವತಿ ನದಿ ಮತ್ತು ಉಪನದಿಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top