ವಿವಿ ಕಾಲೇಜು: ಪತ್ರಿಕೋದ್ಯಮ ಪಠ್ಯಕ್ರಮ ಕುರಿತ ಕಾರ್ಯಾಗಾರ

Upayuktha
0




ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ಪತ್ರಿಕೋದ್ಯಮ ಉಪನ್ಯಾಸಕರಿಗಾಗಿ ನೂತನ ಶಿಕ್ಷಣ ಪದ್ಧತಿ- 2020 ಗೆ ಅನುಗುಣವಾದ ಪತ್ರಿಕೋದ್ಯಮ ಪದವಿ ಪಠ್ಯಕ್ರಮ ಕುರಿತಾಗಿ ಒಂದು ದಿನದ ಕಾರ್ಯಾಗಾರವೊಂದನ್ನು ಕಾಲೇಜಿನ ಡಾ.ಶಿವರಾಮ ಕಾರಂತ ಸಭಾಭವನದಲ್ಲಿ ಏಪ್ರಿಲ್ 4 ರಂದು (ಸೋಮವಾರ) ಆಯೋಜಿಸಿದೆ. 


ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಉಜಿರೆಯ ಎಸ್ ಡಿ ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಭಾಸ್ಕರ ಹೆಗ್ಡೆ ಮುಖ್ಯ ಅತಿಥಿಯಾಗಿರಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್ ಡಿ ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುನಿಲ್ ಹೆಗ್ಡೆ ಹಾಗೂ ಪತ್ರಿಕೋದ್ಯಮ ಶಿಕ್ಷಕ, ಸಬ್ಸ್ಯಾಂಡ್ ಸ್ಕ್ರೈಬ್ಸ್, ಮೀಡಿಯಾ ವೆಂಚರ್ಸ್ನ  ವ್ಯವಸ್ಥಾಪಕ ನಿರ್ದೇಶಕ ಹರ್ಷ ರಾಜ್ ಗಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿರಲಿದ್ದಾರೆ. 


ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಪದವಿ ವಿಭಾಗದ ಅಧ್ಯಯನ ಮಂಡಳಿಯ ಮುಖ್ಯಸ್ಥೆ ಪ್ರೊ. ಕಿಶೋರಿ ನಾಯಕ್ ಕೆ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿರಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಉಪನ್ಯಾಸಕರ ಸಂಘ ಸ್ಥಾಪನೆಗೂ ಚಾಲನೆ ದೊರೆಯಲಿದೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top