ಪುತ್ತೂರು: ಏಪ್ರಿಲ್ 30 ಶನಿವಾರದಂದು ಯುಗಪುರುಷ ಕಿನ್ನಿಗೋಳಿ ಹಾಗೂ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕರಾವಳಿ ಕಾವ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಶಿಕ್ಷಕಿ ಶಾಂತಾ ಪುತ್ತೂರು ಇವರಿಗೆ ಶಿಕ್ಷಣ ಹಾಗೂ ಸಾಹಿತ್ಯ ಸೇವೆಗಾಗಿ "ಯುಗಪುರುಷ ಪ್ರಶಸ್ತಿ" ಪ್ರದಾನ ಮಾಡಲಾಗುವುದೆಂದು ಸಂಫಟಕ ಡಾ.ಶೇಖರ್ ಅಜೆಕಾರು ತಿಳಿಸಿದ್ದಾರೆ.
ಶಾಂತಾ ಪುತ್ತೂರು ಅವರು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕದ ಅಧ್ಯಕ್ಷೆ ಯಾಗಿದ್ದು, ಇವರ ಸೌರಭ ಕವನ ಸಂಕಲನ ಬಿಡುಗಡೆಯಾಗಿದ್ದು, ಅನೇಕ ಪತ್ರಿಕೆಗಳಲ್ಲಿ ಕವನ, ಲೇಖನಗಳು ಪ್ರಕಟವಾಗಿವೆ. ಕ.ಚು.ಸಾ.ಪ. ಜಿಲ್ಲಾ ಕಾರ್ಯದರ್ಶಿಯಾಗಿದ್ದು, ಇವರಿಗೆ ಸಾಹಿತ್ಯ ಸಿಂಧು, ಚೈತನ್ಯ ಶ್ರೀ, ಜ್ಞಾನಸಿಂಧು ರಾಜ್ಯ ಪ್ರಶಸ್ತಿ ಗಳು ಲಭಿಸಿವೆ. ಪ್ರಸ್ತುತ ಸರಕಾರಿ ಪ್ರೌಢಶಾಲೆ ಕಬಕದಲ್ಲಿ ಕನ್ನಡ ಭಾಷಾ ಶಿಕ್ಷಕಿ ಯಾಗಿ ಸೇವೆಸಲ್ಲಿಸುತ್ತಿದ್ದಾರೆ.
ಇದೇ ವೇಳೆ ಮೂಡಬಿದ್ರೆಯ ಉದ್ಯಮಿ ಶ್ರೀಪತಿಭಟ್ ಸಹಿತ ಹಲವರನ್ನು ಸನ್ಮಾನಿಸಲಾಗುವುದು. ಹಾಗೂ ಮನೋರಂಜನೆ ಸಹಿತ ಕಾವ್ಯ ಸಂಭ್ರಮ ಜರುಗಲಿರುವುದು. ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪರ ಅಧ್ಯಕ್ಷತೆಯ ಈ ಸಮಾರಂಭದ ಉದ್ಘಾಟನೆಯನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಮಾಡಲಿದ್ದು ಎಂ.ಆರ್. ವಾಸುದೇವ ರಾವ್ ಸಹಿತ ಹಲವು ಗಣ್ಯರು ಭಾಗವಹಿಸಲಿರುವರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ