|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶೂನ್ಯ ನೆರಳಿನ ದಿನ- ರಾಜ್ಯದಾದ್ಯಂತ ವೀಕ್ಷಿಸಬಹುದಾದ ಖಗೋಳ ವಿದ್ಯಮಾನ

ಶೂನ್ಯ ನೆರಳಿನ ದಿನ- ರಾಜ್ಯದಾದ್ಯಂತ ವೀಕ್ಷಿಸಬಹುದಾದ ಖಗೋಳ ವಿದ್ಯಮಾನ

ಎಲ್ಲೆಲ್ಲಿ- ಯಾವಾಗ?



ಉಡುಪಿ: ಮುಂಬರುವ ದಿನಗಳಲ್ಲಿ ಸೂರ್ಯನು ಆಕಾಶದಲ್ಲಿ ಉತ್ತರ ದಿಕ್ಕಿನತ್ತ  ಚಲಿಸುವಾಗ, ನೀವು ಇರುವ ಸ್ಥಳಕ್ಕೆ  ಅವಲಂಬಿತವಾಗಿ ಸೂರ್ಯನು ಖಮಧ್ಯದ ಮೂಲಕ ಅಂದರೆ ನೆತ್ತಿಯ ನೇರದಲ್ಲಿ  ಹಾದು ಹೋಗುತ್ತಾನೆ. ನೀವು ನಿಂತಿರುವ ಸ್ಥಳದಿಂದ ನೆತ್ತಿಯ ಮೇಲಿರುವ ಬಿಂದುವನ್ನು ಖಮಧ್ಯ (Zenith) ಎನ್ನುತ್ತಾರೆ. ಭೂಮಿಯು ಗೋಳಾಕಾರದಲ್ಲಿರುವುದರಿಂದ ಈ ಬಿಂದುವು ಆಕಾಶಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತದೆ.


ಬೇರೆ ಯಾವುದೇ ಸಮಯದಲ್ಲಿ, ಸೂರ್ಯನು ನಿಮ್ಮನ್ನು ಒಂದು ಕೋನದಲ್ಲಿ ಎದುರಿಸುತ್ತಿದ್ದರೆ, ನಿಮ್ಮ ನೆರಳು ನಿಮ್ಮ ಸುತ್ತಲಿನ ನೆಲದ ಮೇಲೆ ಬೀಳುತ್ತದೆ. ಸೂರ್ಯನು ಆಕಾಶದಲ್ಲಿ ಮೇಲೇರುತ್ತಿದ್ದಂತೆ, ನೆರಳಿನ ಉದ್ದವು ಕಡಿಮೆಯಾಗುತ್ತದೆ ಮತ್ತು ಈ ದಿನ, ಸೂರ್ಯನು ನಿಮ್ಮ ತಲೆಯ ಮೇಲೆ ನಿಖರವಾಗಿ ಇರುವಾಗ, ನಿಮ್ಮ ನೆರಳು ನೇರವಾಗಿ ನಿಮ್ಮ ಕೆಳಗಿರುತ್ತದೆ. ನೀವು ನಿಮ್ಮ ನೆರಳಿನ ಮೇಲೆಯೇ ನಿಂತಿರುವುದರಿಂದ ಈ ನೆರಳು ನಿಮಗೆ ಗೋಚರಿಸುವುದಿಲ್ಲ ಅಥವಾ ಇದನ್ನು ಶೂನ್ಯ ನೆರಳು ಎನ್ನುತ್ತೇವೆ (Zero Shadow). 


ಭೂಮಿಯು 23.5 ಡಿಗ್ರಿ ಕೋನದಲ್ಲಿ ಬಾಗಿರುವುದರಿಂದ (ಗ್ಲೋಬ್ಗಳನ್ನು ತಯಾರಿಸಿದಂತೆ), ಭೂಮಿಯು ಸೂರ್ಯನ ಸುತ್ತ ಚಲಿಸುವಾಗ, ಸೂರ್ಯನು ಉತ್ತರದಿಂದ ದಕ್ಷಿಣಕ್ಕೆ ಚಲಿಸುವಂತೆ ಕಾಣುತ್ತದೆ, ಕರ್ಕಾಟಕ ಸಂಕ್ರಾಂತಿ ವೃತ್ತ ಹಾಗೂ ಮಕರ ಸಂಕ್ರಾಂತಿ ವೃತ್ತದ ನಡುವೆ ವಾಸಿಸುವ ಎಲ್ಲ ಜನರಿಗೆ ವರ್ಷದ ಎರಡು ದಿನಗಳಲ್ಲಿ ಸೂರ್ಯನು ಉತ್ತುಂಗದಲ್ಲಿ ಕಾಣಿಸಿಕೊಳ್ಳುತ್ತಾನೆ. ಈ ಎರಡು ದಿನಗಳು ಪ್ರತಿ ವರ್ಷ ಏಪ್ರಿಲ್-ಮೇ ಮತ್ತು ಆಗಸ್ಟ್ನಲ್ಲಿ ಸಂಭವಿಸುತ್ತವೆ. ಆಗಸ್ಟ್  ತಿಂಗಳು ಮಳೆಗಾಲವಾಗಿದ್ದರಿಂದ, ಬೇಸಿಗೆ ಕಾಲವಾದ ಏಪ್ರಿಲ್ ತಿಂಗಳಿನಲ್ಲಿ ಈ ಶೂನ್ಯ ನೆರಳಿನ ದಿನಗಳನ್ನು ನೋಡುವ ಸಾಧ್ಯತೆ ಹೆಚ್ಚಿರುತ್ತದೆ. ಯಾವುದೇ ಉಪಕರಣಗಳನ್ನು ಬಳಸದೆ ಗಮನಿಸಬಹುದಾದ ಸುಲಭವಾದ ಖಗೋಳ ವಿದ್ಯಮಾನಗಳಲ್ಲಿ ಇದು ಒಂದು.

ಮಂಗಳೂರಿನ ಜನರು ಏಪ್ರಿಲ್ 24 ರಂದು ಮಧ್ಯಾಹ್ನ 12:28ಕ್ಕೆ ಮತ್ತು ಏಪ್ರಿಲ್ 25ರಂದು ಉಡುಪಿಯಲ್ಲಿ ಮಧ್ಯಾಹ್ನ 12:29ಕ್ಕೆ ಶೂನ್ಯ ನೆರಳಿನ ವಿದ್ಯಮಾನವನ್ನು ವೀಕ್ಷಿಸಬಹುದು. ಬೆಂಗಳೂರಿನ ಜನರು ಈ  ವಿದ್ಯಮಾನವನ್ನು ಏಪ್ರಿಲ್ 24 ರಂದು ಮಧ್ಯಾಹ್ನ 12:18ಕ್ಕೆ ಗಮನಿಸಬಹುದು.


ಕರ್ನಾಟಕದಲ್ಲಿ ಶೂನ್ಯ ನೆರಳಿನ ದಿನದ ದಿನಾಂಕಗಳು ಹೀಗಿವೆ:

22 ಏಪ್ರಿಲ್: ಮೈಸೂರು, ಮಡಿಕೇರಿ

23 ಏಪ್ರಿಲ್: ಮಂಡ್ಯ, ಪುತ್ತೂರು 

24 ಏಪ್ರಿಲ್: ಮಂಗಳೂರು (ಡಿ.ಕೆ.), ಹಾಸನ, ಬೆಂಗಳೂರು

25 ಏಪ್ರಿಲ್: ಉಡುಪಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ 

26 ಏಪ್ರಿಲ್: ಕುಂದಾಪುರ, ತೀರ್ಥಹಳ್ಳಿ, ಗೌರಿಬಿದನೂರ್

27 ಏಪ್ರಿಲ್: ಭಟ್ಕಳ, ಶಿವಮೊಗ್ಗ, ಚನ್ನಗಿರಿ

28 ಏಪ್ರಿಲ್: ಹೊನ್ನವರ, ಕುಮ್ಟ, ಶಿಕಾರಿಪುರ, ಚಿತ್ರದುರ್ಗ

29 ಏಪ್ರಿಲ್: ಗೋಕರ್ಣ, ಶಿರಸಿ, ರಾಣೆಬೆನ್ನೂರು, ದಾವಣಗೆರೆ

30 ಏಪ್ರಿಲ್: ಕಾರವಾರ , ಹಾವೇರಿ

01 ಮೇ: ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ

02 ಮೇ: ಧಾರವಾಡ, ಗದಗ 

03 ಮೇ: ಬೆಳಗಾವಿ, ಸಿಂಧನೂರ್

04 ಮೇ: ಗೋಕಾಕ್, ಬಾಗಲಕೋಟೆ, ರಾಯಚೂರು

06 ಮೇ: ಯಾದಗಿರಿ 

07 ಮೇ: ವಿಜಯಪುರ

09 ಮೇ: ಕಲ್ಬುರ್ಗಿ

10 ಮೇ: ಹುಮ್ನಾಬಾದ್

11 ಮೇ: ಬೀದರ್


ಮೇಲಿನ ಸ್ಥಳದ ನೆರಳುಗಳು ಪೂರ್ವಕ್ಕೆ ಮಧ್ಯಾಹ್ನ 12:15 ರಿಂದ ಮತ್ತು ರಾಜ್ಯದ ಪಶ್ಚಿಮ ಭಾಗಗಳಿಗೆ ಮಧ್ಯಾಹ್ನ 12:35ರ ನಡುವೆ ಒಂದು ನಿಮಿಷ ಕಣ್ಮರೆಯಾಗುತ್ತವೆ.


ಶೂನ್ಯ ನೆರಳನ್ನು ಗಮನಿಸಲು, ವಸ್ತುವು ಸಿಲಿಂಡರ್, ಕ್ಯೂಬ್ ಅಥವಾ ಶಂಕುವಿನಂತೆ ಮೇಲಿನಿಂದ ಕೆಳಕ್ಕೆ ಸಮಾನ ಅಥವಾ ಹೆಚ್ಚುತ್ತಿರುವ ಅಗಲವನ್ನು ಹೊಂದಿರಬೇಕು. ಮನುಷ್ಯರ ದೇಹದ ಮೇಲ್ಭಾಗವು, ಕೆಳಭಾಗಕ್ಕಿಂತ ವಿಶಾಲವಾಗಿದ್ದರಿಂದ ಸ್ವಲ್ಪ ಪ್ರಮಾಣದಲ್ಲಿ ನೆರಳನ್ನು ಉಂಟು ಮಾಡುತ್ತದೆ, ಹಾಗೂ ಇದು ಶೂನ್ಯ ನೆರಳಿನ ದಿನದಂದು ಅತ್ಯಲ್ಪ ಪ್ರಮಾಣದಲ್ಲಿ ಕಾಣುತ್ತದೆ.


ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ, ಈ ಸುಂದರವಾದ ಖಗೋಳ ವಿದ್ಯಮಾನವನ್ನು ವೀಕ್ಷಿಸಲು ಮತ್ತು ಆನಂದಿಸಲು ಜನರಲ್ಲಿ ನಿರೀಕ್ಷಿಸುತ್ತದೆ. ನೆರಳು ಕಣ್ಮರೆಯಾಗುವುದನ್ನು ನೋಡಲು ಹೊರಟ ಎಲ್ಲರಿಗೂ ಶುಭ್ರ ಆಕಾಶ ಸಿಗಲಿ ಎಂದು ಆಶಿಸುತ್ತೇವೆ.

- ಅತುಲ್ ಭಟ್

ಭೌತಶಾಸ್ತ್ರ ಪ್ರಾಧ್ಯಾಪಕರು,

ಪೂರ್ಣಪ್ರಜ್ಞ ಕಾಲೇಜು ಉಡುಪಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

0 Comments

Post a Comment

Post a Comment (0)

Previous Post Next Post