|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಿರುಚಿತ್ರಕ್ಕೆ ಉತ್ತಮ ಛಾಯಾಗ್ರಹಣ ಪ್ರಶಸ್ತಿ

ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಿರುಚಿತ್ರಕ್ಕೆ ಉತ್ತಮ ಛಾಯಾಗ್ರಹಣ ಪ್ರಶಸ್ತಿಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ನಿರ್ಮಿಸಿದ 'ಮೌನ' ಕಿರುಚಿತ್ರ ರಾಷ್ಟ್ರ ಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ಉತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ಆಳ್ವಾಸ್ ಶಿಕ್ಷಣ ಸಂಸ್ಥೆ ಆಯೋಜಿಸಿದ ಎರಡನೇ ಆವೃತ್ತಿಯ ‘ಆಳ್ವಾಸ್ ಅರೆನಾ' ರಾಷ್ಟ್ರ ಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ‘ಮೌನ' ಕಿರುಚಿತ್ರವು ಉತ್ತಮ ಛಾಯಾಗ್ರಹಣ ವಿಭಾಗದಲ್ಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.  

ಈ ಚಿತ್ರದ ಕಥೆಯನ್ನು ಸ್ನಾತಕೋತ್ತರ ಸಮೂಹ ಸಂವಹನ ವಿದ್ಯಾರ್ಥಿಗಳು ರಚಿಸಿದ್ದು, ಕಿರುಚಿತ್ರವನ್ನು ಆಚಲ್ ಉಬರಡ್ಕ ನಿರ್ದೇಶಿಸಿದ್ದಾರೆ. ಕಿರುಚಿತ್ರದ ಛಾಯಾಗ್ರಹಣವನ್ನು ಪ್ರಸೀದ ಕೃಷ್ಣ ಕಲ್ಲೂರಾಯ ಮಾಡಿದ್ದು, ಮುಖ್ಯ ಪಾತ್ರದಲ್ಲಿ ಪೃಥ್ವಿ ಪುಣಚ ಮತ್ತು ಜಗದೀಶ ಜೆ ನಟಿಸಿದ್ದಾರೆ.


ಇವರಿಗೆ ವಿವೇಕಾನಂದ ಕಾಲೇಜಿನ  ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post