
ಮಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಮೇ 17ರಿಂದ 21ರ ವರೆಗೆ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಮೇ 17ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲಾ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಮೇ 18ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಮೇ 21ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ