ಮಂಗಳೂರು: ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುದ್ದಿಯುತ್ತಿದೆ. ಕಳೆದ ಎರಡು ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿದ್ದ ಮಳೆ ಇಂದು ಬೆಳಗಿನಿಂದಲೇ ಸತತವಾಗಿ ಸುರಿಯುತ್ತಿದೆ. ಇನ್ನೂ ಎರಡು ದಿನಗಳ ಕಾಲ ಇದೇ ರೀತಿ ಮಳೆಯಾಗುವ ಮುನ್ಸೂಚನೆಯಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಶಾಲೆಗಳಿಗೆ ಇಂದು (ಮೇ 19) ರಜೆ ಘೋಷಿಸಿದ್ದಾರೆ.
ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಗುರುವಾರ ಒಂದು ದಿನ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ಮೇ 16ರಿಂದ ಈ ಶೈಕ್ಷಣಿಕ ವರ್ಷದ ಶಾಲಾ ತರಗತಿಗಳು ಆರಂಭವಾಗಿದ್ದವು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ