ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ವಜ್ರಪಂಜರ ಆರಾಧನೆ ನಡೆಯಿತು.
ಸಂಜೆ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ ೧೦೮ ಕಲಶಗಳಿಂದ ಅಭಿಷೇಕದೊಂದಿಗೆ ವಾರ್ಷಿಕೋತ್ಸವ ಸಮಾಪನಗೊಂಡಿತು.
ಪೂಜ್ಯ ಅಮಿತಂಜನ್‌ಕೀರ್ತಿ ಮುನಿ ಮಹಾರಾಜರು ಮಂಗಲ ಪ್ರವಚನ ನೀಡಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಊರಿನ ಶ್ರಾವಕರು, ಶ್ರಾವಕಿಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ