||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ದಿವ್ಯಾಂಗರಿಗೂ ಸ್ವಾವಲಂಬಿ ಬದುಕು ಸಾಧ್ಯ: ಡಾ. ಎಂ ಶಾಂತರಾಮ ಶೆಟ್ಟಿ

ದಿವ್ಯಾಂಗರಿಗೂ ಸ್ವಾವಲಂಬಿ ಬದುಕು ಸಾಧ್ಯ: ಡಾ. ಎಂ ಶಾಂತರಾಮ ಶೆಟ್ಟಿ


ಮಂಗಳೂರು: ಹಸಿದ ಹೊಟ್ಟೆಗೆ ಉಣಬಡಿಸುವುದಕ್ಕಿಂತ ಹೊಟ್ಟೆ ತುಂಬಿಸಿಕೊಳ್ಳಲು ಬೇಕಾದ ಕಾಯಕವನ್ನು ದಿವ್ಯಾಂಗರಿಗೆ ಮತ್ತು ವಿಶಿಷ್ಟ ಚೇತನರಿಗೆ ಕಲಿಸುವ ಅವಶ್ಯಕತೆ ಇದೆ, ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ. ಎಂ ಶಾಂತರಾಮ ಶೆಟ್ಟಿ ಅಭಿಪ್ರಾಯಪಟ್ಟರು. 


ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ರವಿವಾರ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟಚೇತನರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ. ಜಿಲ್ಲಾ ಶಾಖೆ  ಮತ್ತು ಯುವ ಮಂಗಳೂರು ವಿಶ್ವವಿದ್ಯಾಲಯದ ರೆಡ್ ಕ್ರಾಸ್ ಘಟಕ ಜಂಟಿಯಾಗಿ ಆಯೋಜಿಸಿದ್ದ ಸಂಘದ 30 ನೇ ವರ್ಷದ ವಾರ್ಷಿಕ ಸಮಾವೇಶ ಹಾಗೂ ದಿವ್ಯಾಂಗರಿಗೆ ವೈದ್ಯಕೀಯ ನೆರವು ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಅಂಗವಿಕಲರಾಗಿ ಹುಟ್ಟಿದ ಮಾತ್ರಕ್ಕೆ ಧೃತಿಗೆಡಬೇಕಾಗಿಲ್ಲ. ಬೇರೆಯವರ ಅನುಕಂಪಕ್ಕೆ ಕಾಯದೆ ದೃಢಮನಸ್ಸಿನಿಂದ ಸ್ವಂತ ಸಾಮರ್ಥ್ಯದಲ್ಲಿ ಬದುಕನ್ನು  ಸಾಗಿಸುವಂತಾಗಬೇಕು,”ಎಂದರು.  


ಕಾರ್ಯಕ್ರಮ ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಸಿ ಎ ಶಾಂತಾರಾಮ ಶೆಟ್ಟಿ ಮಾತನಾಡಿ,  ರೆಡ್ ಕ್ರಾಸ್, ದಿವ್ಯಾಂಗರು ಮತ್ತು ವಿಕಲಚೇತನರಿಗಾಗಿ ಅನೇಕ ಕೊಡುಗೆ ನೀಡಿದೆ. ಸಮಾಜದಲ್ಲಿನ ದಾನಿಗಳ ನೆರವನ್ನು ಪಡೆದು ಸಮಾಜಕ್ಕಾಗಿಯೇ ವಿನಿಯೋಗಿಸುವ ಏಕೈಕ ಸಂಸ್ಥೆಯಾಗಿ ರೆಡ್ ಕ್ರಾಸ್ ಕಾರ್ಯನಿರ್ವಹಿಸುತ್ತಿದೆ. “ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ಕಾಲೇಜುಗಳಲ್ಲಿನ ದಿವ್ಯಾಂಗ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ಮಾಡುವ ಕೆಲಸಕ್ಕೆ ಮುಂದಾಗಿರುವುದು ಸ್ವಾಗತಾರ್ಹ,” ಎಂದರು.  


ಮುಖ್ಯ ಅತಿಥಿ, ಮಂಗಳೂರು ಮಹಾನಗರಪಾಲಿಕೆಯ ಮಹಾಪೌರ ಪ್ರೇಮಾನಂದ ಶೆಟ್ಟಿ, ಸರಕಾರ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯ ವ್ಯಾಪ್ತಿಯಲ್ಲಿ ದಿವ್ಯಾಂಗರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು. ಸಕ್ಷಮ ಟ್ರಸ್ಟಿನ ಟ್ರಸ್ಟಿ ಜಯದೇವ ಕಾಮತ್ ದಿವ್ಯಾಂಗರಿಗಾಗಿ ಟ್ರಸ್ಟ್ ಕೈಗೊಳ್ಳುತ್ತಿರುವ ಕ್ರಮಗಳ ಮಾಹಿತಿ ನೀಡಿದರು. ದಿವ್ಯಾಂಗರು ಮತ್ತು ವಿಶಿಷ್ಟಚೇತನರಿಗೆ ದೊರಕುವ ಸೌಲಭ್ಯಗಳ ಮಾಹಿತಿ ಪುಸ್ತಕವನ್ನು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ರೈ ಬಿಡುಗಡೆಗೊಳಿಸಿದರು. 


ಅಪಘಾತಕ್ಕೊಳಗಾಗಿ ಬೆನ್ನುಹುರಿ ತೊಂದರೆಯಿದ್ದರೂ, ಸಮಾಜದಲ್ಲಿ ಇಂತಹ ತೊಂದರೆಗೊಳಗಾಗಿ ಕಷ್ಟಪಡುತ್ತಿರುವವರಿಗೆ ಸಹಾಯ ಮಾಡುತ್ತಿರುವ ಬೆಳ್ತಂಗಡಿ ತಾಲೂಕಿನ ಸೇವಾಭಾರತಿ ಟ್ರಸ್ಟ್ ನ ಅಧ್ಯಕ್ಷ  ವಿನಾಯಕ ರಾವ್ ಕನ್ಯಾಡಿ ಅವರನ್ನು  ಸನ್ಮಾನಿಸಲಾಯಿತು


ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಪ್ರಭಾಕರ ಶರ್ಮಾ, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ನ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ವಿಶಿಷ್ಟಚೇತನರ ಸಂಘದ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ವಿಶಿಷ್ಟಚೇತನರ ಸಂಘದ ಅಧ್ಯಕ್ಷ ಡಾ. ಮುರಳಿಧರ್ ನಾಯಕ್ ಪ್ರಾಸ್ತಾವಿಕ ದೊಂದಿಗೆ ಸ್ವಾಗತ ಮಾಡಿದರು. ರೆಡ್ ಕ್ರಾಸ್ ನ ದಿವ್ಯಾಂಗ ಕೋಶದ ಚೇರ್ಮನ್ ಡಾ. ಕೆ ಆರ್ ಕಾಮತ್ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ದಿನಮಣಿ ರಾವ್ ನಿರೂಪಿಸಿದರು.  


ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ದಿವ್ಯಾಂಗ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಯಿತು. ದಿವ್ಯಾಂಗ ಮತ್ತು ವಿಕಲಚೇತನರಿಗೆ ಮಾಹಿತಿ ಶಿಬಿರ ನಡೆಸಿಕೊಟ್ಟ ಡಾ. ಮುರಳಿಧರ ನಾಯಕ್, ವಿದ್ಯಾರ್ಥಿಗಳು ತಮ್ಮ ಅಂಗ ನ್ಯೂನತೆಯಿಂದ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಮೊಟಕುಗೊಳಿಸದೆ ಸ್ವಂತ ಸಾಧನೆಯ ಹೆಜ್ಜೆ ಇಡಬೇಕು ಎಂದರು. ಚರ್ಚೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post