ಉಡುಪಿ ಲೀಡ್ ಕಾಲೇಜು ಪ್ರಾಂಶುಪಾಲರಾಗಿ ಡಾ. ಸುರೇಶ್ ರೈ, ಕೆ ಅಧಿಕಾರ ಸ್ವೀಕಾರ

Upayuktha
0


ಉಡುಪಿ: ಉಡುಪಿ ಜಿಲ್ಲಾ ಲೀಡ್ ಕಾಲೇಜಾದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಪ್ರಾಂಶುಪಾಲರಾಗಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಸುರೇಶ್ ರೈ. ಕೆ ಇವರು ಇಂದು (ಮೇ 31, 2022) ಅಧಿಕಾರ ಸ್ವೀಕರಿಸಿದರು.


ಉಡುಪಿ ಜಿಲ್ಲೆಯ ಲೀಡ್ ಕಾಲೇಜೆಂದು ಹೆಗ್ಗಳಿಕೆ ಪಡೆದ ತೆಂಕನಿಡಿಯೂರು ಕಾಲೇಜು ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ವಿವಿಧ ಕಾರ್ಯಚಟುವಟಿಕೆಗಳ ಕುರಿತು ಜಿಲ್ಲಾಡಳಿತಕ್ಕೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಗೆ ಮಾಹಿತಿಯನ್ನು ನೀಡುವ ಜವಾಬ್ದಾರಿಯನ್ನು ಹೊಂದಿದ್ದು, ಈ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಪ್ರಥಮವಾಗಿ ಸ್ನಾತಕೋತ್ತರ ಪದವಿ ಕೋರ್ಸುಗಳನ್ನು ಆರಂಭಿಸಿದ ಕೀರ್ತಿಯನ್ನು ಹೊಂದಿದೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

ಇದೀಗ ಇಲ್ಲಿನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಡಾ. ಸುರೇಶ್ ರೈ ಕೆ ಇವರು ತಮ್ಮ 27 ವರ್ಷಗಳ ಸೇವಾ ಅವಧಿಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಉಡುಪಿ ಹಾಗೂ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಉತ್ತಮ ಎನ್.ಎಸ್.ಎಸ್. ಅಧಿಕಾರಿಯಾಗಿ, ನ್ಯಾಕ್ ಸಂಯೋಜಕರಾಗಿ, ಐ.ಎ.ಸಿ ಸಂಚಾಲಕರಾಗಿ ಕಾರ್ಯನಿರ್ವಹಿಸಿದವರು.


ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಇವರ ಸಂಶೋಧನ ಲೇಖನಗಳು ಪ್ರಕಟವಾಗಿದ್ದು, 30ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರು ಪ್ರಕಟಿಸಿದ ಕೃತಿಗಳಲ್ಲಿ ಕೆಲವು ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗಕ್ಕೆ ಪಠ್ಯ ಪುಸ್ತಕವಾಗಿ ವಿದ್ಯಾರ್ಥಿಗಳು ಅಭ್ಯುಸಿಸುತ್ತಿದ್ದಾರೆ. ಇವರು ಡಾ. ಜಗದೀಶ್ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ 'ಜುಡಿಶಿಯಲ್ ಸಿಸ್ಟಮ್ ಇನ್ ದಿ ಸೋಶಿಯಲ್ ಟ್ರೇಡಿಶನ್ ಆಫ್ ತುಳುನಾಡು' ಎಂಬ ಸಂಶೋಧನಾ ಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.


web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top