ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮೋದ್ ಮಧ್ವರಾಜ್ ರಾಜೀನಾಮೆ

Upayuktha
0

ಉಡುಪಿ: ಮಾಜಿ ಸಚಿವ ಹಾಗೂ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಕೆಪಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಕಾಂಗ್ರೆಸ್ ಪಕ್ಷ ಈ ವರೆಗೆ ತಮಗೆ ನೀಡಿರುವ ಅವಕಾಶಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.


 ಹಿಂದೆ ಚುನಾಯಿತ ಜನಪ್ರತಿನಿಧಿಯಾಗಿದ್ದಾಗ ರಾಜ್ಯದ ನಂ.1 ಅತ್ಯುತ್ತಮ ಶಾಸಕ ಎಂಬ ಹೆಸರಿಗೆ ಪಾತ್ರನಾಗಿದ್ದೆ. ತಾನು ಕಷ್ಟಪಟ್ಟು ಸಂಪಾದಿಸಿದ ಹಣದಿಂದ ಉಡುಪಿ ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಲು ಬಹಳಷ್ಟು ಶ್ರಮಿಸಿದ್ದರೂ, ಪ್ರಸ್ತುತ ತಮಗೆ ಜಿಲ್ಲೆಯಲ್ಲಿ ಪಕ್ಷದೊಳಗೆ ಉಸಿರುಕಟ್ಟುವ ವಾತಾವರಣವಿದೆ. ತಮ್ಮ ದೂರು-ದುಮ್ಮಾನಗಳನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇಂತಹ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳದೆ, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪ್ರಮೋದ್ ಮಧ್ವರಾಜ್ ಪತ್ರದಲ್ಲಿ ವಿವರಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top