ನಿಟ್ಟೆ: ನಿಟ್ಟೆ ರುಕ್ಮಿಣೀ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಆಶ್ರಯದಲ್ಲಿ ಇತ್ತೀಚೆಗೆ ಜರುಗಿದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಹ್ವಾನಿತ ಅಂತರ್ ಕಾಲೇಜು ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಅತಿಥೇಯ ನಿಟ್ಟೆ ರುಕ್ಮಿಣೀ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ.
ವಿಜೇತ ತಂಡದ ನಾಯಕ ರೋಹಿತ್ ಉತ್ತಮ ಆಲ್ರೌಂಡರ್ ಹಾಗೂ ಸಾತ್ವಿಕ್ ಉತ್ತಮ ಆಟೆಕರ್ ವೈಯಕ್ತಿಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು.
ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಡಾ| ಐ. ಆರ್. ಮಿತ್ತಂತಾಯ ಹಾಗೂ ಅತಿಥೇಯ ಕಾಲೇಜಿನ ನಿವ್ರೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಮುರಳಿಧರ್ ಶರ್ಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪ್ರಶಸ್ತಿಗಳನ್ನು ವಿತರಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ ಕುಮಾರ್ ಕೆ ಅಧ್ಯಕ್ಷತೆ ವಹಿಸಿ ಎಲ್ಲರನ್ನೂ ಸ್ವಾಗತಿಸಿ, ಸಂಸ್ಥೆಯ ಉಪನ್ಯಾಸಕ ರಾಜೇಶ್ ಬಿ. ಎಸ್ ಪ್ರಶಸ್ತಿ ವರದಿ ಮಂಡಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಗಂಗಾಧರ್ ಪೂಜಾರಿ ಧನ್ಯವಾದ ಸಮರ್ಪಿಸಿದರು. ಸಂಸ್ಥೆಯ ಕ್ರೀಡಾ ಆಡಳಿತಾಧಿಕಾರಿ ಶ್ಯಾಮ್ ಸುಂದರ್ ಹಾಗೂ ಸಂಸ್ಥೆಯ ವಾಲಿಬಾಲ್ ತಂಡದ ತರಬೇತುದಾರ ಡಾ| ನಿತಿನ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ