ಮೇ 5ರಂದು ಕನ್ನಡ ಸಾಹಿತ್ಯ ಪರಿಷತ್ತು 108ನೇ ಸಂಸ್ಥಾಪನಾ ದಿನಾಚರಣೆ

Upayuktha
0

ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಆಶ್ರಯದಲ್ಲಿ ಕಸಾಪ ಸಾಹಿತ್ಯ ಪರಿಷತ್ತಿನ 108 ನೇ ಸಂಸ್ಥಾಪನಾ ದಿನಾಚರಣೆ ಮೇ 5ರಂದು ಸಂಜೆ 5ಕ್ಕೆ ಶ್ರೀ ನಾಟ್ಯಾಂಜಲಿ ಕಲಾಮಂದಿರ ಖಂಡಿಗೆ ಚೇಳ್ಯಾರ್ ಸುರತ್ಕಲ್ ಇಲ್ಲಿ ಜರುಗಲಿರುವುದು ಎಂದು ಕಸಾಪ ಮಂಗಳೂರು ತಾಲೂಕು ಘಟಕದ ಕಾರ್ಯದರ್ಶಿ ಡಾ.ಮುರಲೀ ಮೋಹನ್ ಚೂಂತಾರ್ ಹಾಗೂ ಗಣೇಶ್ ಪ್ರಸಾದ್ ಜೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಮಂಗಳೂರು ತಾಲೂಕು ಘಟಕದ ಪದಾಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದು ಕಸಾಪ ಮಂಗಳೂರು ತಾಲೂಕು ಅಧ್ಯಕ್ಷರಾದ ಡಾ.ಮಂಜುನಾಥ್ ರೇವಣ್‌ಕರ್ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಎಲ್ಲಾ ಕನ್ನಡ ಬಂಧುಗಳಿಗೆ ಮತ್ತು ಸದಸ್ಯರುಗಳಿಗೆ ಈ ಕಾರ್ಯಕ್ರಮಕ್ಕೆ ಮುಕ್ತ ಆಹ್ವಾನವಿದೆ. ಮತ್ತು ಈ ಸಂದರ್ಭದಲ್ಲಿ ಹಿರಿಯ ಕನ್ನಡ ಸಾಹಿತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕಾರ್ಯದರ್ಶಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಇದೇ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ. ಮಂಗಳೂರು ತಾಲೂಕು ಕನಿಷ್ಠ ಒಂದು ಸಾವಿರ ಮಂದಿಯನ್ನು ಸದಸ್ಯರನ್ನಾಗಿಸುವ ಯೋಜನೆಯನ್ನು ರೂಪಿಸಿದೆ ಎಂದು ಕಾರ್ಯದರ್ಶಿಗಳು ತಿಳಿಸಿದ್ದಾರೆ.


ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾದ ಮಹಾಬಲೇಶ್ವರ ಎಂ.ಎಸ್ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.


ಡಾ.ಮಾಧವ ಎಂ.ಕೆ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶ್ರೀಮತಿ ಶಕುಂತಲಾ ಭಟ್ ಹಿರಿಯ ಸಾಹಿತಿ, ಹಳೆಯಂಗಡಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಸಮಾರಂಭದಲ್ಲಿ ಹಿರಿಯ ಸಾಹಿತಿಗಳಾದ ಮುದ್ದು ಮೂಡುಬೆಳ್ಳೆ, ಡಾ.ಪಿ.ಅನಂತ ಕೃಷ್ಣ ಭಟ್, ಬಂದಗದ್ದೆ ನಾಗರಾಜ್, ಡಾ.ಜ್ಯೋತಿ ಚೇಳ್ಯಾರ್, ಕೇಶವ ಕುಡ್ಲ ಇವರನ್ನು ಸನ್ಮಾನಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top