ಎಸ್‍ಎಸ್‍ಎಲ್‍ಸಿ ಫಲಿತಾಂಶ: 5 ವಿದ್ಯಾರ್ಥಿಗಳಿಗೆ 625 | ಶೇ.100 ಫಲಿತಾಂಶ ಪಡೆದ ಆಳ್ವಾಸ್ ಶಾಲೆ

Upayuktha
0

ಕನ್ನಡ ಮಾಧ್ಯಮ ಶಾಲೆಗಳ ಫಲಿತಾಂಶದಲ್ಲಿ ಆಳ್ವಾಸ್ ರಾಜ್ಯಕ್ಕೇ ನಂ.1



ಮೂಡುಬಿದಿರೆ: 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಶಾಲೆಗಳ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದು, 5 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಈ ಅದ್ವಿತೀಯ ಸಾಧನೆ ಮೆರೆದ ರಾಜ್ಯದ ಏಕೈಕ ಕನ್ನಡ ಮಾಧ್ಯಮ ಶಾಲೆ ಎಂಬ ಹಿರಿಮೆಗೆ ಆಳ್ವಾಸ್ ಪಾತ್ರವಾಗಿದೆ. ಆಳ್ವಾಸ್ ಶಾಲೆಯ 379 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ, ಶೇ.100 ಫಲಿತಾಂಶ ದಾಖಲಿಸಿದೆ.


ಶಿಕ್ಷಣ ಇಲಾಖೆಯಿಂದ ರಾಜ್ಯದ ನಂ.1 ಕನ್ನಡ ಮಾಧ್ಯಮ ಶಾಲೆ ಎಂದು ಗುರುತಿಸಲ್ಪಟ್ಟ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಇಂದಿರಾ ಅರುಣ್, ಕಲ್ಮೇಶ್ವರ್ ಪುಂಡಲೀಕ್ ನಾಯ್ಕ್, ಸುದೇಶ್ ದತ್ತಾತ್ರೇಯ, ಶ್ರೇಯಾ ಆರ್.ಶೆಟ್ಟಿ ಹಾಗೂ ಈರಯ್ಯ ಶ್ರೀಶೈಲ್ 625ಕ್ಕೆ 625 ಸಾಧನೆ ಮಾಡಿದ ವಿದ್ಯಾರ್ಥಿಗಳು. ಈ ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಶಿಕ್ಷಣವನ್ನು ಪಡೆದಿರುವ ವಿದ್ಯಾರ್ಥಿಗಳಾಗಿದ್ದಾರೆ.


ಎರಡೂ ಶಾಲೆಗಳು ಸೇರಿ, 41 ವಿದ್ಯಾರ್ಥಿಗಳು 625 ರಲ್ಲಿ 620ಕ್ಕಿಂತ ಅಧಿಕ ಅಂಕಗಳನ್ನು ಪಡೆದಿದ್ದು, 141 ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕಗಳನ್ನು ಪಡೆದಿದ್ದಾರೆ. ಒಟ್ಟು 274 ವಿದ್ಯಾರ್ಥಿಗಳು 85% ಅಂಕಗಳೊಂದಿಗೆ, ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆ ಹೊಂದಿದ್ದಾರೆ.


ಆಳ್ವಾಸ್ ಶಾಲೆಯ 5 ವಿದ್ಯಾರ್ಥಿಗಳು 6 ವಿಷಯಗಳಲ್ಲೂ 100ಕ್ಕೆ 100 ಅಂಕ ಪಡೆದರೆ, 15 ವಿದ್ಯಾರ್ಥಿಗಳು 5 ವಿಷಯಗಳಲ್ಲಿ, 28 ವಿದ್ಯಾರ್ಥಿಗಳು 4 ವಿಷಯಗಳಲ್ಲಿ, 35 ವಿದ್ಯಾರ್ಥಿಗಳು 3 ವಿಷಯಗಳಲ್ಲಿ, 51 ವಿದ್ಯಾರ್ಥಿಗಳು 2 ವಿಷಯಗಳಲ್ಲಿ ಹಾಗೂ 56 ವಿದ್ಯಾರ್ಥಿಗಳು 1 ವಿಷಯದಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ.


ಪ್ರಥಮ ಭಾಷೆ ಕನ್ನಡದಲ್ಲಿ 51 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದರೆ, ದ್ವಿತೀಯ ಭಾಷೆ ಕನ್ನಡದಲ್ಲಿ 29 ವಿದ್ಯಾರ್ಥಿಗಳು, ತೃತೀಯ ಭಾಷೆ ಕನ್ನಡದಲ್ಲಿ 17 ವಿದ್ಯಾರ್ಥಿಗಳು, ದ್ವಿತೀಯ ಭಾಷೆ ಇಂಗ್ಲೀಷ್‍ನಲ್ಲಿ 26 ವಿದ್ಯಾರ್ಥಿಗಳು, ಪ್ರಥಮ ಭಾಷೆ ಸಂಸ್ಕೃತದಲ್ಲಿ 20 ವಿದ್ಯಾರ್ಥಿಗಳು, ತೃತೀಯ ಭಾಷೆ ಹಿಂದಿಯಲ್ಲಿ 90 ವಿದ್ಯಾರ್ಥಿಗಳು, ತೃತೀಯ ಭಾಷೆ ಸಂಸ್ಕೃತದಲ್ಲಿ 13 ವಿದ್ಯಾರ್ಥಿಗಳು ಹಾಗೂ ಗಣಿತದಲ್ಲಿ 69 ವಿದ್ಯಾರ್ಥಿಗಳು, ವಿಜ್ಞಾನದಲ್ಲಿ 66 ವಿದ್ಯಾರ್ಥಿಗಳು, ಸಮಾಜ ವಿಜ್ಞಾನದಲ್ಲಿ 106 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದು ಅಮೋಘ ಸಾಧನೆ ಮೆರೆದಿದ್ದು, ಆಳ್ವಾಸ್ ಶಾಲೆಗಳ ಒಟ್ಟು 487 ಪತ್ರಿಕೆಗಳು 100ಕ್ಕೆ 100 ಅಂಕಗಳನ್ನು ಪಡೆದಿವೆ.


ಈ ಸಾಧನೆ ಮೆರೆದ ಆಳ್ವಾಸ್ ಶಾಲೆಗಳ ವಿದ್ಯಾರ್ಥಿಗಳ ಪೈಕಿ, 134 ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಶಿಕ್ಷಣವನ್ನು ಪಡೆದಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಬಿ., ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಾ ಟಿ. ಮೂರ್ತಿ, ಆಳ್ವಾಸ್ ಶಾಲೆಯ ಆಡಳಿತಾಧಿಕಾರಿ ಪ್ರೀತಂ ಕುಂದರ್ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top