||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಲೇಜು ಆವರಣದೊಳಗೆ ಯಾವುದೇ ಕಾರಣಕ್ಕೂ ಹಿಜಾಬ್‌ಗೆ ಅವಕಾಶವಿಲ್ಲ: ಕುಲಪತಿಗಳ ಸ್ಪಷ್ಟನುಡಿ

ಕಾಲೇಜು ಆವರಣದೊಳಗೆ ಯಾವುದೇ ಕಾರಣಕ್ಕೂ ಹಿಜಾಬ್‌ಗೆ ಅವಕಾಶವಿಲ್ಲ: ಕುಲಪತಿಗಳ ಸ್ಪಷ್ಟನುಡಿ

ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ: ಶಾಸಕ ವೇದವ್ಯಾಸ ಕಾಮತ್‌ ಮತ್ತು ಕುಲಪತಿಗಳ ನೇತೃತ್ವದಲ್ಲಿ ಸಭೆಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಜತೆ ಸಭೆ ನಡೆಸಿದರು. ವಿದ್ಯಾರ್ಥಿಗಳಿಂದ ನಿನ್ನೆಯ ಘಟನೆಯ ವಿವರ ಪಡೆದುಕೊಂಡು ಅಧ್ಯಾಪಕರ ಜತೆ ಚರ್ಚೆ ನಡೆಸಿದರು.


ಸರಕಾರದ ನಿಯಮ ಮತ್ತು ಹೈಕೋರ್ಟ್ ಆದೇಶಗಳು ಪಿಯು ಕಾಲೇಜುಗಳಿಗೆ ಮಾತ್ರವಲ್ಲ, ವಿಶ್ವವಿದ್ಯಾನಿಲಯಕ್ಕೂ ಅನ್ವಯವಾಗುತ್ತದೆ ಎಂದು ಶಾಸಕರು ತಿಳಿಸಿದರು.


ಪ್ರಾಂಶುಪಾಲರು ಕಾಲ ಕಾಲಕ್ಕೆ ಎಲ್ಲ ಕ್ರಮಗಳ್ನು ಕೈಗೊಂಡಿದ್ದಾರೆ. ಆದರೂ ಆದೇಶ ಅನುಷ್ಠಾನದಲ್ಲಿ ಸ್ವಲ್ಪ ವಿಳಂಬವಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಮುಂದೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು.


ಈ ಸಭೆಯಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಭಾಗವಹಿಸಿದ್ದು, ಕಾಲೇಜಿನ ಪ್ರಾಂಶುಪಾಲರು ಮತ್ತು ಇತರ ಆಡಳಿತ ವರ್ಗದವರ ಜತೆ ಸಮಾಲೋಚನೆ ನಡೆಸಿದರು.


ಅನಂತರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಕುಲಪತಿಗಳು, ಹಿಜಾಬ್ ವಿಚಾರದಲ್ಲಿ ರಾಜ್ಯ ಹೈಕೋರ್ಟ್‌ ಆದೇಶ ಮತ್ತು ಸರಕಾರದ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲಿಸುವಲ್ಲಿ ಯಾವುದೇ ವಿಳಂಬ ಮಾಡುತ್ತಿಲ್ಲ. ಕಾಲೇಜಿನ ಆವರಣದೊಳಗೆ ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಪ್ರವೇಶಿಸುವಂತಿಲ್ಲ ಎಂಬುದನ್ನು ಎಲ್ಲ ವಿದ್ಯಾರ್ಥಿಗಳಿಗೂ ಸ್ಪಷ್ಟ ಮಾತುಗಳಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.


ಒಂದು ವೇಳೆ ಈ ವಿಚಾರದಲ್ಲಿ ಯಾರಿಗಾದರೂ ಆದೇಶದ ಪಾಲನೆಗೆ ಸಹಾಯ ಬೇಕಿದ್ದಲ್ಲಿ ಅದನ್ನು ಒದಗಿಸಲಾಗುವುದು ಅಥವಾ ಆದೇಶ ಪಾಲಿಸಲಾಗದು ಎನ್ನುವವರಿಗೆ ಬೇರೆ ಕಾಲೇಜಿಗೆ ತೆರಳಲು ಅಗತ್ಯ ವ್ಯವಸ್ಥೆ ಮಾಡಲಾಗುವುದು. ಅಥವಾ ಇನ್ಯಾರಿಗಾದರೂ ಕೌನ್ಸೆಲಿಂಗ್‌ನ ಅಗತ್ಯವಿದ್ದಲ್ಲಿ ಕುಲಸಚಿವರ ಜತೆ ಮಾತನಾಡಿ ಆ ವ್ಯವಸ್ಥೆಯನ್ನೂ ಮಾಡಲಾಗುವುದು. ಆದರೆ ಯಾವುದೇ ಕಾರಣಕ್ಕೂ ಕಾಲೇಜಿನ ಆವರಣದೊಳಗೆ ಹಿಜಾಬ್‌ಗೆ ಅವಕಾಶವಿಲ್ಲ ಎಂಬ ಮಾತನ್ನು ಕುಲಪತಿಗಳು ಮತ್ತೊಮ್ಮೆ ಸ್ಪಷ್ಟಪಡಿಸಿದರು.


ಹಿಜಾಬ್ ನಿಷೇಧದ ಆದೇಶ ಸೂಕ್ತವಾಗಿ ಕಾಲೇಜಿನಲ್ಲಿ ಪಾಲನೆಯಾಗುತ್ತಿಲ್ಲ, ಈಗಲೂ ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ ಎಂದು ಆರೋಪಿಸಿ ನಿನ್ನೆ (ಗುರುವಾರ) ಕೆಲವು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಗೊಂದಲ ಬಗೆಹರಿಸಲು ಇಂದು ಶಾಸಕರು ಮತ್ತು ಕುಲಪತಿಗಳ ನೇತೃತ್ವದಲ್ಲಿ ಸಭೆ ನಡೆಸಲಾಯಿತು.


ಒಂದು ವೇಳೆ ಯಾರಾದರೂ ಆದೇಶ ಪಾಲಿಸದಿದ್ದಲ್ಲಿ ಆ ಬಗ್ಗೆ ವಿದ್ಯಾರ್ಥಿಗಳು ದೂರು ನೀಡಿದಲ್ಲಿ ಆ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಅವರು ತಿಳಿಸಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post