ಪಾಣಾಜೆ: ಸುಬೋಧ ಪ್ರೌಢಶಾಲೆ ಪಾಣಾಜೆಯಲ್ಲಿ 2022-2023 ನೇ ಶೈಕ್ಷಣಿಕ ಸಾಲಿನ ಪ್ರಾರಂಭೋತ್ಸವವು ಹೆತ್ತವರು ಹಾಗೂ ಶಾಲಾ ಸಂಚಾಲಕರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ಶಾಲಾ ಸಂಚಾಲಕರಾದ ಶ್ರೀ ಜಿ. ಮಹಾಬಲೇಶ್ವರ ಭಟ್ಟ್ ಅವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳು ಹಾಗೂ ಚಾಕಲೇಟನ್ನು ನೀಡಿ ಶಾಲೆಯ ಬಗ್ಗೆ ವಿವರವಾದ ಮಾಹಿತಿಯನ್ನು ಹೇಳಿ ಶುಭ ಹಾರೈಸಿದರು.
ಶಾಲೆಯ ಮುಖ್ಯಗುರುಗಳಾದ ಶ್ರೀಪತಿ ಇಂದಾಜೆ ಅವರು ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಮಾಹಿತಿಯನ್ನು ನೀಡಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಯವರು ವಂದಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಭಾವೈಕ್ಯತಾ ಗೀತೆಗಳನ್ನು ಹಾಡುವುದರ ಮೂಲಕ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಾಯಿತು. ಮಧ್ಯಾಹ್ನ ಮಕ್ಕಳಿಗೆ ಪಾಯಸದೂಟವನ್ನು ನೀಡಲಾಯಿತು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ