ಡಾ. ಸುಧೀರ್ ರಾಜ್ ಕೆ ಅವರಿಗೆ ಆರ್ಯಭಟ ಪ್ರಶಸ್ತಿ

Upayuktha
0

ಕಾರ್ಕಳ: ನಿಟ್ಟೆಯ ಜಸ್ಟಿಸ್‌ ಕೆ.ಎಸ್‌. ಹೆಗ್ಡೆ ಉದ್ಯಮಾಡಳಿತ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಸುಧೀರ್ ರಾಜ್ ಕೆ ಅವರಿಗೆ ಶಿಕ್ಷಣದಲ್ಲಿ ಸಲ್ಲಿಸಿದ ಉತ್ಕೃಷ್ಟ ಸೇವೆಗಾಗಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.


ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 25ರಂದು ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅರಳಿ ನಾಗರಾಜ್‌, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಷಿ, ಖ್ಯಾತ ಚಲನಚಿತ್ರ ನಟಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಭಾರತಿ ವಿಷ್ಣುವರ್ಧನ್ ಹಾಗೂ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಚ್‌.ಎಲ್‌ ಎನ್. ರಾವ್ ಅವರು ಡಾ. ಸುಧೀರ್ ರಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top