ಪುಂಜಾಲಕಟ್ಟೆ: ರೋವರ್ಸ್‌ & ರೇಂಜರ್ಸ್‌ಗಳಿಗೆ ಬೇಸಿಗೆ ಶಿಬಿರ

Upayuktha
0

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ಆಂತರಿಕ ಗುಣಮಟ್ಟ ಭರವಸೆ ಕೋಶ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರೋವರ್ಸ್ ಮತ್ತು ರೇಂಜರ್ಸ್ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 23.05.2022 ರಿಂದ 26.05.2022 ರ ವರೆಗೆ ಕಾಲೇಜಿನ ರೋವರ್ಸ್ ರೇಂಜರ್ಸ್ ಗಳಿಗೆ ಆಯೋಜಿಸಲಾದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ರೇಂಜರ್ ಲೀಡರ್ ಆದ ಡಾ. ಪ್ರೀತಿ ಕೆ.ರಾವ್ ರವರು ಶಿಬಿರಾರ್ಥಿಗಳಿಗೆ ಶುಭಾಶಯಗಳನ್ನು ಕೋರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್. ಕೆ ಇವರು ಸ್ಕೌಟ್ ಗೈಡ್ಸ್ ಚಳುವಳಿ, ಶಿಬಿರ, ಪರೀಕ್ಷೆ ಇವುಗಳ ಬಗೆಗೆ ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ದೀಪದಂತೆ ಅವರು ಬೆಳಗಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ  ಡಾ. ಟಿ.ಕೆ ಶರತ್ ಕುಮಾರ್ ರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ವಿಭಾಗದ ಸಂಚಾಲಕರಾದ ಡಾ. ಲೋಕೇಶ್ ಹಾಗೂ ಎಲ್ಲಾ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ರೇಂಜರ್ ಸುಷ್ಮಾ ಸ್ವಾಗತಿಸಿ, ರೋವರ್ ಕೀರ್ತಿ ಧನ್ಯವಾದವಿತ್ತರು. ರೋವರ್ ಚೇತನ್ ಎಂ.ಆರ್ ಕಾರ್ಯಕ್ರಮ ನಿರೂಪಿಸಿದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top