ಶ್ರೀನಿವಾಸ ವಿವಿ, ಹೋಟೆಲ್ ಮ್ಯಾನೇಜ್‌ಮೆಂಟ್‌ ಸಂಸ್ಥೆಯಿಂದ 30ನೇ ವರ್ಷದ ಆಹಾರ ಉತ್ಸವ

Upayuktha
0

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ, ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಟೂರಿಸಂ, ಪಾಂಡೇಶ್ವರ, ಮಂಗಳೂರು ಇದರ 30 ನೇ ವರ್ಷದ ವಾರ್ಷಿಕ ಆಹಾರ ಉತ್ಸವ “HOG – 2K22”  ಏಪ್ರಿಲ್ 30 ರಂದು ಆಚರಿಸಲಾಯಿತು.


ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ, ಎ. ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಸಿಎ. ಎ. ರಾಘವೇಂದ್ರ ರಾವ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಂಗಳೂರಿನ ತಾಜ್ ಗೇಟ್‌ವೇ ಹೋಟೆಲ್ ನ ಜನರಲ್ ಮ್ಯಾನೇಜರ್ ಪೀಟರ್ ನಿರ್ಮಲ್ ಅವರು ಉತ್ಸವವನ್ನು ಉದ್ಘಾಟಿಸಿದರು.


ಗೌರವ ಅತಿಥಿಗಳಾಗಿ ಗೌರವಾನ್ವಿತ ಸಹ ಕುಲಾಧಿಪತಿ ಹಾಗೂ ಎ. ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷರಾದ ಡಾ.ಎ. ಶ್ರೀನಿವಾಸ್ ರಾವ್, ಶ್ರೀನಿವಾಸ ವಿವಿಯ ವಿಶ್ವಸ್ತ ಮಂಡಳಿ ಸದಸ್ಯರಾದ ಶ್ರೀಮತಿ ಎ. ವಿಜಯಲಕ್ಷ್ಮೀ ಆರ್. ರಾವ್ ಹಾಗೂ ಪ್ರೊ. ಎ. ಮಿತ್ರ ಎಸ್. ರಾವ್, ಅವರು ಉಪಸ್ಥಿತರಿದ್ದರು.


ರಿಜಿಸ್ಟ್ರಾರ್ ಡಾ.ಅನಿಲ್ ಕುಮಾರ್, ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್, ಶ್ರೀನಿವಾಸ್ ವರ್ದಾ ಸೇಫಾರಾನ್ ನ ಜನರಲ್ ಮ್ಯಾನೇಜರ್ ಉಪೇಂದ್ರ ಸಿಂಗ್ ರಾವತ್, ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಟೂರಿಸಂನ  ಡೀನ್ ಪ್ರೊ. ಸ್ವಾಮಿನಾಥನ್ ಎಸ್., ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಡೀನ್ ಪ್ರೊ. ರಾಜಶೇಖರ್ ಮತ್ತು ಸಂಸ್ಥೆಯ ಸಿಬ್ಬಂದಿವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಎಲ್ಲ ಹೋಟೆಲ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳಿಗೆ ಈವೆಂಟ್ ಮ್ಯಾನೇಜ್‌ಮೆಂಟ್‌ನ ಜಟಿಲತೆಗಳು ಮತ್ತು ಸೂಕ್ಷ್ಮತೆಗಳ ಅರಿವು ಮೂಡಿಸಲು 1992 ರಿಂದ ವಾರ್ಷಿಕ ಆಹಾರ ಉತ್ಸವವನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಮಾರಾಟ ಮತ್ತು ಮಾರ್ಕೆಟಿಂಗ್, ಆಹಾರ ಉತ್ಪಾದನೆ, ಎಫ್ & ಬಿ ಸೇವೆ, ಖರೀದಿ ಮತ್ತು ಇತರ ನಿರ್ವಹಣಾ ಕೌಶಲ್ಯಗಳಂತಹ ವಿವಿಧ ಅಂಶಗಳ ಅನುಭವ ಪಡೆದುಕೊಂಡರು. ಈ ಕಾರ್ಯಕ್ರಮವನ್ನು IV ಸೆಮಿಸ್ಟರ್ ವಿದ್ಯಾರ್ಥಿಯಾದ ಶ್ರೀ ಕ್ಲಾರನ್ ಫ್ರಾಂಕ್ ಅಬ್ರೆಯೋ ನಿರ್ವಹಿಸಿದರು.


ಜ್ವಾಲೆ ಮತ್ತು ಜಗ್ಲಿಂಗ್, ಸಾಂಸ್ಕೃತಿಕ ಕಾರ್ಯಕ್ರಮ, ಬಾಯಲ್ಲಿ ನೀರೂರಿಸುವ ಖಾದ್ಯಗಳು ಸಂಜೆಯ ರಂಗನ್ನು ಹೆಚ್ಚಿಸಿತು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top