|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಸಾವರ್ಕರ್ ಜಯಂತಿಯ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಯೋಜನೆ

ಸಾವರ್ಕರ್ ಜಯಂತಿಯ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಯೋಜನೆ




ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಐ.ಕ್ಯು.ಎ.ಸಿ ಘಟಕ, ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಹಾಗೂ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಜಯಂತಿಯ ಅಂಗವಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಮೇ 20ರ ಒಳಗೆ ಪ್ರಬಂಧವನ್ನು ಕಳುಹಿಸಲು ಅವಕಾಶವಿರುತ್ತದೆ.


ಪ್ರಬಂಧದ ವಿಷಯ:

ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ: ರಾಷ್ಟ್ರಜಾಗೃತಿಯಲ್ಲಿ ಸ್ವಾತಂತ್ರ್ಯವೀರ ಸಾವರ್ಕರ್ ಅವರ ಪಾತ್ರ

ಪದವಿ ವಿದ್ಯಾರ್ಥಿಗಳಿಗೆ: ಸಮಾಜ ಸುಧಾರಕ ಸಾವರ್ಕರ್

ಪದವಿಪೂರ್ವ ವಿದ್ಯಾರ್ಥಿಗಳಿಗೆ: ವಿದ್ಯಾರ್ಥಿ ಸಾವರ್ಕರ್ ಮತ್ತು ದೇಶಪ್ರೇಮ

ಸ್ಪರ್ಧೆಯ ನಿಯಮಗಳು:

• ಸ್ಪರ್ಧೆಯಲ್ಲಿ ಪ್ರಸ್ತುತ ಪದವಿಪೂರ್ವ, ಪದವಿ ಮತ್ತು ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದು. ಪ್ರಬಂಧ ೧೫೦೦ ಪದಗಳ ಮಿತಿಯಲ್ಲಿರಲಿ.

• ಸ್ಪರ್ಧೆಗೆ ಕಳುಹಿಸುವ ಪ್ರಬಂಧ ವಿದ್ಯಾರ್ಥಿಯ ಸ್ವಂತ ರಚನೆಯಾಗಿರಬೇಕು. ಈವರೆಗೆ ಎಲ್ಲಿಯೂ ಯಾವ ರೀತಿಯಲ್ಲೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು. 

• ಕಳುಹಿಸುವ ಪ್ರಬಂಧವನ್ನು ಕಾಲೇಜು ವಿಭಾಗ ಮುಖ್ಯಸ್ಥರಿಂದ ದೃಢೀಕರಿಸಬೇಕು.

• ಸ್ಪರ್ಧೆಯಲ್ಲಿ ಭಾಗವಹಿಸಿದ ಪ್ರಬಂಧವನ್ನು ಹಿಂದಿರುಗಿಸುವ ವ್ಯವಸ್ಥೆ ಇರುವುದಿಲ್ಲ.

• ಸ್ಪರ್ಧಿಗಳು ತಮ್ಮ ಹೆಸರು, ಪರಿಚಯ, ಮೊಬೈಲ್ ನಂಬರ್, ಕಾಲೇಜಿನ ಹೆಸರು, ಸೀಲ್ ಇತ್ಯಾದಿಗಳು ಇರುವ ಹಾಳೆಯನ್ನು ಪ್ರಬಂಧ ಬರೆದು ಕಳುಹಿಸಲು ಉಪಯೋಗಿಸಬಾರದು. ಪ್ರಬಂಧವನ್ನು ಹಾಳೆಯ ಒಂದೆ ಮಗ್ಗುಲಲ್ಲಿ ಸ್ಪುಟವಾಗಿ ಬರೆದಿರಬೇಕು. ಹಾಳೆಗಳನ್ನು ಚಿತ್ರಗಳಿಂದ, ಬಣ್ಣಗಳಿಂದ ಅಲಂಕರಿಸುವುದು ಬೇಡ.

• ಸ್ಪರ್ಧಿಗಳು ತಮ್ಮ ಹೆಸರು, ಪರಿಚಯ, ಮೊಬೈಲ್ ನಂಬರ್, ಕಾಲೇಜಿನ ಹೆಸರು, ವಿಳಾಸ ಇತ್ಯಾದಿಗಳನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದು ಲಗತ್ತಿಸಬೇಕು. ಜೊತೆಗೆ ಭಾವಚಿತ್ರವೂ ಇರಬೇಕು.

• ಪ್ರಬಂಧವನ್ನು ನುಡಿ, ಬರಹ ಅಥವಾ ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ competitions@vcputtur.ac.in ಈ ವಿಳಾಸಕ್ಕೆ ಇ-ಮೇಲ್ ಮೂಲಕವೂ ಕಳುಹಿಸಬಹುದು. ಲಿಖಿತ ಪ್ರಬಂಧವನ್ನು ಕಳುಹಿಸಬೇಕಾದ ಅಂಚೆ ವಿಳಾಸ: ಪ್ರಾಂಶುಪಾಲರು, ವಿವೇಕಾನಂದ ಮಹಾವಿದ್ಯಾಲಯ, ನೆಹರೂ ನಗರ, ಪುತ್ತೂರು, ದಕ್ಷಿಣ ಕನ್ನಡ ಜಿಲ್ಲೆ. ಪಿನ್: 574203

• ಫಲಿತಾಂಶವನ್ನು  ಸಾವರ್ಕರ್ ಜಯಂತಿಯಂದು ವಿವೇಕಾನಂದ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಲಾಗುವುದು

• ಸ್ಪರ್ಧೆಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲೂ ಪ್ರಾಚಾರ್ಯರು ಮತ್ತು ಸ್ಪರ್ಧಾ ಸಮಿತಿಯ ತೀರ್ಮಾನವೇ ಅಂತಿಮ.

• ಪ್ರಬಂಧ ತಲುಪಿಸಲು ಕೊನೆಯ ದಿನಾಂಕ: ಮೇ 20, 2022

ಸಂಪರ್ಕ ಸಂಖ್ಯೆ: 8197306857, 8547240871

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ (ಪ್ರತ್ಯೇಕವಾಗಿ) ಪ್ರಥಮ ರೂ.3000, ದ್ವಿತೀಯ ರೂ.2000 ಹಾಗೂ ತೃತೀಯ ರೂ.1000 ನಗದು ಬಹುಮಾನ ನೀಡಿ ಗೌರವಿಸಲಾಗುವುದು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post