ವಿವಿ ಕಾಲೇಜು: ನಾಳೆಯಿಂದ ಎನ್ಎಸ್ಎಸ್ ವಾರ್ಷಿಕ ಶಿಬಿರ

Upayuktha
0



ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಎನ್ಎಸ್ಎಸ್ ಘಟಕಗಳ ಸಹಯೋಗದೊಂದಿಗೆ ಪಕ್ಷಿಕೆರೆಯ ಕೆಮ್ರಾಲ್‌ನ ಪಂಜದಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ ʼವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆʼ ಎಂಬ ಧ್ಯೇಯದೊಂದಿಗೆ ‘ವಾರ್ಷಿಕ ಶಿಬಿರ 2021-22’, ಮೇ 9 ರಿಂದ ಮೇ 15 ರವರೆಗೆ ನಡೆಯಲಿದೆ. 


ಸೋಮವಾರ ಮಧ್ಯಾಹ್ನ 2.30 ಕ್ಕೆ ಮೂಲ್ಕಿ- ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಶಿಬಿರ ಉದ್ಘಾಟಿಸಲಿದ್ದಾರೆ. ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಪಂಜದಗುತ್ತು ಶಾಂತಾರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎನ್ ಡಿ ಅಜ್ಜಯ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವರಾಜ್ ಮೊದಲಾದವರು ಅತಿಥಿಗಳಾಗಿರಲಿದ್ದಾರೆ.  


ಶಾಲಾ ಆಟದ ಮೈದಾನದ ವಿಸ್ತರಣೆ ಹಾಗೂ ತೋಟದ ಸ್ವಚ್ಛತೆ, ಸಾಂಕ್ರಮಿಕ ರೋಗ ತಡೆಗಟ್ಟುವಿಕೆ ಕುರಿತು ಅರಿವು, ಶಿಬಿರಾರ್ಥಿಗಳಲ್ಲಿ ಸಾಮಾಜಿಕ ಹಾಗೂ ಶಾರೀರಿಕ ವಿಕಸನ, ಸಹಬಾಳ್ವೆ, ಶ್ರಮದಾನ ಹಾಗೂ ಮಾನವೀಯ ಮೌಲ್ಯಗಳ ಕುರಿತು ಆಸಕ್ತಿ ಮೂಡಿಸುವುದು ಶಿಬಿರದ ಧ್ಯೇಯೋದ್ದೇಶವಾಗಿದೆ. ಪ್ರತಿದಿನ ಬೆಳಗ್ಗೆ 7 ರಿಂದ 6.30 ರವರೆಗೆ ಚಟುವಟಿಕೆಗಳು ನಡೆಯಲಿದ್ದು ವಿವಿಧ ವಿಷಯಗಳ ಕುರಿತು ಉಪನ್ಯಾಸ, ಸಮೀಕ್ಷೆ, ತರಬೇತಿ, ಪ್ರಕೃತಿ ವೀಕ್ಷಣೆ/ ಚಾರಣ ಜೊತೆಗೆ ಸಾಂತಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ವಿವಿದ ಕ್ಷೇತ್ರಗಳಿಂದ ಸಂಪನ್ಮೂಲ ವ್ಯಕ್ತಿಗಳು, ರಾಜ್ಯ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. 


ಮೇ 15 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿʼಸೋಜ ಸಮಾರೋಪ ಭಾಷಣ ಮಾಡಲಿದ್ದಾರೆ, ಎಂದು ಮಂಗಳೂರು ವಿವಿಯ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜನಾ ಅಧಿಕಾರಿ ಡಾ. ನಾಗರತ್ನ ಕೆ ಎ, ವಿವಿ ಕಾಲೇಜಿನ ಎನ್ಎಸ್ಎಸ್ ಅಧಿಕಾರಿಗಳಾದ ಡಾ. ಸುರೇಶ್ ಹಾಗೂ ಡಾ. ಗಾಯತ್ರಿ ಎನ್ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top