ಕರಾವಳಿಯ 3 ಜಿಲ್ಲೆಗಳ ಸಹಿತ 14 ಜಿಲ್ಲೆಗಳಿಗೆ ಬಿರುಗಾಳಿ, ಮಳೆಯ ಮುನ್ಸೂಚನೆ

Upayuktha
0

ಮಂಗಳೂರು: ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಕರಾವಳಿ ಜಿಲ್ಲೆಗಳು ಸೇರಿದಂತೆ 14 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆಯಾಗಲಿದೆ.


ಗುಡುಗು ಸಹಿತ ಹಗುರದಿಂದ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಯಾವುದೇ ಸಂಭಾವ್ಯ ಅಪಾಯಗಳನ್ನು ನಿರ್ವಹಿಸಲು ಮುಂಜಾಗರೂಕತೆ ವಹಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.


ಕರಾವಳಿ ಜಿಲ್ಲೆಗಳ ಜತೆಗೆ ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಈ ಹವಾಮಾನ ಮುನ್ಸೂಚನೆ ಜಾರಿಮಾಡಲಾಗಿದೆ.

ಸಂಜೆ 4 ಗಂಟೆಗೆ ಇಲಾಖೆಯಿಂದ ಈ ಮುನ್ನೆಚ್ಚರಿಕೆ ಜಾರಿಯಾಗಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top