ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ, ಘಟಕ ಹಾಗೂ ಸ್ವಾಯತ್ತ ಕಾಲೇಜುಗಳಲ್ಲಿ ದಿನಾಂಕ ಜೂನ್ 20 ರಿಂದ ಶೈಕ್ಷಣಿಕ ವರ್ಷ 2022-23ನೇ ಸಾಲಿನ ಸ್ನಾತಕ ಕಾರ್ಯಕ್ರಮಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಪ್ರಕಾರ ಪ್ರವೇಶಾತಿ ಪ್ರಾರಂಭಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ತಾವು ಸೇರಲಿಚ್ಚಿಸುವ ಕಾಲೇಜುಗಳನ್ನು ಸಂಪರ್ಕಿಸುವಂತೆ ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.
ವಿವಿ ಕಾಲೇಜು: ಸ್ನಾತಕ ಪದವಿ ಪ್ರವೇಶಾತಿ ಆರಂಭ
ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜೂನ್ 20 ರಿಂದ ಶೈಕ್ಷಣಿಕ ವರ್ಷ 2022-23ನೇ ಸಾಲಿನ ಸ್ನಾತಕ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪ್ರಾರಂಭಿಸಲಾಗಿದೆ. ಈ ಬಾರಿ ಪ್ರವೇಶ ಪ್ರಕ್ರಿಯೆಗಳು UUCMS (Unified University & College Management System) ತಂತ್ರಾಂಶದ ಮೂಲಕ ನಡೆಯಲಿರುವುದರಿಂದ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಸಧ್ಯಕ್ಕೆ ತಮ್ಮ ಮಾಹಿತಿಯನ್ನು ಕಾಲೇಜಿನ ಕಛೇರಿಯಲ್ಲಿರುವ ನೋಂದಣಿ ಪುಸ್ತಕದಲ್ಲಿ ದಾಖಲಿಸತಕ್ಕದ್ದು.
ಇದರೊಂದಿಗೆ ವಿಶ್ವವಿದ್ಯಾನಿಲಯ ಕಾಲೇಜಿನ ವೆಬ್ ಸೈಟ್ www.universitycollegemangalore.com ನಲ್ಲಿರುವ Admission 2022 ಶೀರ್ಷಿಕೆಯಡಿಯಲ್ಲಿ “UUCMS Link to Online Application” ನಲ್ಲಿ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ