|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಡುಪ್ರಾಣಿಗಳಿಗಾಗಿ ಹಣ್ಣುಹಂಪಲುಗಳ ಗಿಡ ಬೆಳೆಸುವ ಯೋಜನೆಗೆ ಬಿತ್ತೋತ್ಸವ: ರಾಜ್ಯದಲ್ಲಿ ಹತ್ತು ಲಕ್ಷ ಗಿಡಗಳ ನಾಟಿ

ಕಾಡುಪ್ರಾಣಿಗಳಿಗಾಗಿ ಹಣ್ಣುಹಂಪಲುಗಳ ಗಿಡ ಬೆಳೆಸುವ ಯೋಜನೆಗೆ ಬಿತ್ತೋತ್ಸವ: ರಾಜ್ಯದಲ್ಲಿ ಹತ್ತು ಲಕ್ಷ ಗಿಡಗಳ ನಾಟಿ


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಣ್ಣಿನ ಗಿಡಗಳ ಬಿತ್ತೋತ್ಸವಕ್ಕೆ ಚಾಲನೆ ನೀಡಿದರು.


ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಲ್ಲಿ ಮೂವತ್ತೈದು ಲಕ್ಷ ರೂ. ವೆಚ್ಚದಲ್ಲಿ ಹತ್ತು ಲಕ್ಷ ಗಿಡಗಳನ್ನು ನಾಟಿ ಮಾಡಲಾಗುವುದು ಎಂದು ಧರ್ಮಸ್ಥಳದ ಧಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಬುಧವಾರ ಬೆಳಾಲು ಗ್ರಾಮದ ದಡಂತಮಲೆ ರಕ್ಷಿತಾರಣ್ಯದಲ್ಲಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆ ಮತ್ತು ಸ್ಥಳೀಯ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕಾಡುಪ್ರಾಣಿಗಳಿಗಾಗಿ ಹಣ್ಣು ಹಂಪಲುಗಳ  ಗಿಡಗಳನ್ನು ಬೆಳೆಸುವ “ ಬಿತ್ತೋತ್ಸವ” ಕ್ಕೆ ಚಾಲನೆ ನೀಡಿ ಮಾತನಾಡಿದರು.


ಸುಂದರ ಪ್ರಕೃತಿ-ಪರಿಸರವನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ.


ಪ್ರಕೃತಿಯ ಸಮತೋಲನವನ್ನು ಕಾಪಾಡುವ ಕಾಡು ಪ್ರಾಣಿಗಳನ್ನು ರಕ್ಷಿಸಬೇಕು. ಎಲ್ಲರೂ ಪರಿಸರ ಸಂರಕ್ಷಣೆಗೆ ದೃಢ ಸಂಕಲ್ಪ ಮಾಡಿ ಕೆಲಸ ಮಾಡಿದರೆ ಅದು ಮುಂದಿನ ಪೀಳಿಗೆಗೆ ಉತ್ತಮ ಕೊಡುಗೆಯಾಗುತ್ತದೆ. ಮಣ್ಣಿನ ಸವಕಳಿಯಿಂದ ಅಪಾಯ ಉಂಟಾಗಲು ಅರಣ್ಯ ನಾಶವೇ ಕಾರಣವೆಂದು ಅವರು ಹೇಳಿದರು.


ಅಧ್ಯಕ್ಷತೆ ವಹಿಸಿದ ಶಾಸಕ ಹರೀಶ್ ಪೂಂಜ, ಹೆಗ್ಗಡೆಯವರ ಪರಿಸರ ಸಂರಕ್ಷಣೆಯ ಕಾಳಜಿ ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯವಾಗಿದೆ ಎಂದು ಹೇಳಿದರು.


ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನೆಟಲ್‍ಕರ್, ಉಪ ಸಂರಕ್ಷಣಾಧಿಕಾರಿ ಡಾ. ವೈ.ಕೆ. ದಿನೇಶ್ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪರಮೇಶ್ವರಿ ಗೌಡ ಉಪಸ್ಥಿತರಿದ್ದರು.


ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ವಿ. ಕಾರ್ಯಪ್ಪ ಸ್ವಾಗತಿಸಿದರು. ಜೈವಂತ ಪಟಗಾರ್ ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದವಿತ್ತರು.

• ಧರ್ಮಸ್ಥಳದ ನೇತೃತ್ವದಲ್ಲಿ ಈ ಬಾರಿ ಜೂನ್ 5 ರಂದು ರಾಜ್ಯದ 175 ತಾಲ್ಲೂಕುಗಳ 875 ಸ್ಥಳಗಳಲ್ಲಿ 1,81,000 ಗಿಡಗಳನ್ನು ನೆಡಲಾಗಿದೆ.

• ಪುನಶ್ಚೇತನಗೊಳಿಸಿದ ಕೆರೆಗಳ ವಠಾರದಲ್ಲಿ ಹಣ್ಣು-ಹಂಪಲುಗಳ ಗಿಡಗಳನ್ನು ಬೆಳೆಸಲಾಗುತ್ತದೆ.

• ಇತ್ತೀಚೆಗೆ ನಿಧನರಾದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಅವರ ಸಂಗ್ರಹದಲ್ಲಿದ್ದ ಅನೇಕ ಜಾತಿಯ ಬೀಜಗಳನ್ನು ಬಿತ್ತೋತ್ಸವದಲ್ಲಿ ಬಳಸಲಾಯಿತು.

• ಅಧಿಕ ಜಾತಿಯ ಗಿಡಗಳ ಬೀಜಗಳನ್ನು ಸಂಗ್ರಹಿಸಿದ ವಿದ್ಯಾರ್ಥಿಗಳಾದ ಪಲ್ಲವಿ, ಶ್ರವಣ ಕುಮಾರ್ ಮತ್ತು ನಿಖಿತಾ ಅವರಿಗೆ ಅರಣ್ಯ ಇಲಾಖೆ ವತಿಯಿಂದ ಬಹುಮಾನ ನೀಡಿ ಗೌರವಿಸಲಾಯಿತು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 تعليقات

إرسال تعليق

Post a Comment (0)

أحدث أقدم