ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ನೂತನ ಕಾರ್ಯದರ್ಶಿಯಾಗಿ ಡಾ. ಎಸ್. ಸತೀಶ್ಚಂದ್ರ ನೇಮಕಗೊಂಡಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲ್ಲೂಕಿನ ಸುರ್ಯಗುತ್ತು ನಿವಾಸಿಯಾದ ಡಾ. ಎಸ್. ಸತೀಶ್ಚಂದ್ರ ಉಜಿರೆಯಲ್ಲಿ ಎಸ್.ಡಿ.ಎಂ. ಕನ್ನಡ ಮಾಧ್ಯಮ ಪ್ರೌಢಶಾಲೆ, ಎಸ್.ಡಿ.ಎಂ. ಕಾಲೇಜಿನ ಪ್ರತಿಭಾವಂತ ಹಿರಿಯ ವಿದ್ಯಾರ್ಥಿಯಾಗಿದ್ದು ಅದೇ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ, ಬಳಿಕ ಪ್ರಾಂಶುಪಾಲರಾಗಿ ನಿವೃತ್ತರಾದರು.
ಉತ್ತಮ ಉಪನ್ಯಾಸಕರಾಗಿ, ಶಿಸ್ತಿನ ಸಿಪಾಯಿಯಾಗಿ, ದಕ್ಷ ಆಡಳಿತಗಾರರಾಗಿ ಅವರು ಚಿರಪರಿತರು. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿಯೂ ಉತ್ತಮ ಸೇವೆ ನೀಡಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ