ಮೂಡುಬಿದಿರೆ: ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಕನ್ನಡ ವೇದಿಕೆ ಹಾಗೂ ಎನ್‍ಎಸ್‍ಎಸ್ ಘಟಕದ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಲುಮರದ ಶ್ರೀಶಕುಮಾರ್ ಎಂದೇ ಖ್ಯಾತರಾದ, ಪರಿಸರವಾದಿ ಹಾಗೂ ವಿವೇಕಾನಂದ ಕಾಲೇಜಿನ ಸಂಸ್ಕøತ ಉಪನ್ಯಾಸಕ ಡಾ. ಶ್ರೀಶ ಕುಮಾರ್ ಮಾತನಾಡಿ, ಪ್ರತಿ ವಿದ್ಯಾರ್ಥಿ ಒಂದೊಂದು ಗಿಡನೆಟ್ಟು ಪೋಷಿಸಬೇಕು. ದಿನ ನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕ್ ಉಪಯೋಗಕ್ಕೆ ಕಡಿವಾಣ ಹಾಕಬೇಕು. ಭಾರತ ದೇಶ ಅತ್ಯಂತ ಜಲ ಸಂಪದ್ಭರಿತ ಹಾಗೂ ನಿತ್ಯಹರಿದ್ವರ್ಣ ಕಾಡುಗಳಿಂದ ಕೂಡಿದ ದೇಶವಾಗಿದ್ದರೂ, ಇಂದು ವಿವಿಧ ಬಗೆಯ ಮಾಲಿನ್ಯಗಳನ್ನು ಎದುರಿಸುತ್ತಿದೆ. ಇದನ್ನು ತಡೆಗಟ್ಟುವ ಸರಳ ಕ್ರಮಗಳನ್ನು ಯುವ ಜನಾಂಗಕ್ಕೆ ತಿಳಿಸಿದರು.
ಈ ಸಂದರ್ಭ ಮಾತನಾಡಿದ ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಡಾ.ಪ್ರವೀಣ್ ರಾಜ್ ಆಳ್ವ, ಪರಿಸರ ರಕ್ಷಣೆಯ ಹಿನ್ನಲೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಅಳಿಲು ಸೇವೆಯನ್ನು ಸಲ್ಲಿಸಿದರೆ ಅರ್ಥಪೂರ್ಣ ಬದಲಾವಣೆ ಕಾಣಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಾಗೂ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.
ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ನಿರ್ಮಿಸುವ ಶಪಥ ತೊಟ್ಟರು.
ಕಾರ್ಯಕ್ರಮದಲ್ಲಿ ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ ರೋಶನ್ ಪಿಂಟೋ ಉಪಸ್ಥಿತರಿದ್ದರು. ಕನ್ನಡ ವೇದಿಕೆಯ ಸದಸ್ಯರಾದ ರಕ್ಷಿತ್ ಸ್ವಾಗತಿಸಿ, ಕನ್ನಡ ವೇದಿಕೆಯ ಅದ್ಯಕ್ಷ ವೈಶಾಖ್ ವಂದಿಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ