ಹಕ್ಕುಗಳಷ್ಟೇ ಕರ್ತವ್ಯಗಳ ಪ್ರಜ್ಞೆ ನಾಗರಿಕರಿಗೆ ಬೇಕು: ಪ್ರಶಾಂತ್ ಎನ್

Upayuktha
0

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ನಾಗರಿಕ ಜವಾಬ್ದಾರಿಗಳು ಮತ್ತು ರಾಷ್ಟ್ರ ನಿರ್ಮಾಣ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.


ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶ್ರೀ ಪ್ರಶಾಂತ್ ಎನ್. ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿ  “ಪ್ರಜೆಗಳಿಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ಅನುಭವಿಸಲು ಉತ್ಸುಕರಾಗಿರುವಷ್ಟೇ ಸಂವಿಧಾನ ವಹಿಸಿರುವ ಕರ್ತವ್ಯಗಳನ್ನು ನಿಭಾಯಿಸಲು ಉತ್ಸುಕರಾಗಿಬೇಕು, ವಿದ್ಯಾರ್ಥಿಗಳು ಈಗಿನಿಂದಲೇ ಸಮಾಜದಲ್ಲಿ ತಮ್ಮಿಂದಾದ ಸಹಾಯವನ್ನು ಮಾಡುವ ಅಭ್ಯಾಸವನ್ನು ರೂಢಿ ಮಾಡಿಕೊಳ್ಳಬೇಕು. ಈ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು” ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.


ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಸಂಖ್ಯಾಶಾಸ್ತ್ರ ವಿಭಾಗ ಮುಖ್ಯಸ್ಥ ಶ್ರೀ ಉಮೇಶ್ ಪೈ ವಹಿಸಿದ್ದರು.  ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಶ್ರೀಮತಿ ಸುಷ್ಮಾ ಟಿ. ಹಾಗೂ ಡಾ. ಮಹೇಶ್ ಕುಮಾರ್ ಕೆ.ಇ. ಉಪಸ್ಥಿತರಿದ್ದರು. ಶಿಬಿರಾರ್ಥಿ ಶೃತಿಕಾ ಸ್ವಾಗತಿಸಿ, ವೈಷ್ಣವಿ ವಂದಿಸಿದರು. ಕು. ಅನೀಶಾ ಕ್ರಿಸ್ತಜ್ಯೋತಿ ನಿರೂಪಿಸಿದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top