|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಭಾರೀ ಮಳೆ: ತುರ್ತು ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ; ನಾಳೆ (ಜುಲೈ 1) ಶಾಲಾ-ಕಾಲೇಜುಗಳಿಗೆ ರಜೆ

ಭಾರೀ ಮಳೆ: ತುರ್ತು ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ; ನಾಳೆ (ಜುಲೈ 1) ಶಾಲಾ-ಕಾಲೇಜುಗಳಿಗೆ ರಜೆ


ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನ ಬಳಿಕ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಮಳೆ ಬಿರುಸು ಮುಂದುವರಿದ ಹಿನ್ನಲೆಯಲ್ಲಿ ಶುಕ್ರವಾರವೂ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಕಾಲೇಜುಗಳು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ1ರಂದು ರಜೆ ಘೋಷಿಸಲಾಗಿದೆ.

ಜಿಲ್ಲೆಯಾದ್ಯಂತ ಆರೆಂಜ್– ಅಲರ್ಟ್ ಘೋಷಣೆಯಾಗಿದ್ದು, ಕಳೆದ 24 ತಾಸುಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿದೆ ಹಾಗೂ ಇದೇ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದೆ. ಆದ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.

ಮುಂಗಾರು ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ  ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.


ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಇಳಿಯಬಾರದು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ನಿರ್ವಹಿಸುವುದು.

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು ಅವರು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.

ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ ಸಮುದ್ರತೀರಕ್ಕೆ ತೆರಳಬಾರದು.

ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು.

ಜು. 4 ರಿಂದ 7ರ ವರೆಗೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಇದ್ದು, ಅತಿ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಪ್ರತಿ ತಾಲೂಕು ಘಟಕಗಳು, ತಾಲೂಕು ವಿಪತ್ತು ನಿರ್ವಹಣಾ ಸಮಿತಿಗಳು ಪೂರ್ವ ಸನ್ನದ್ಧವಾಗಿರಬೇಕು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ ಕಂಟ್ರೋಲ್ ರೂಂ 1077 ಅಥವಾ 0824 2442590 ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 تعليقات

إرسال تعليق

Post a Comment (0)

أحدث أقدم