|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಪ್ಪಿನಂಗಡಿಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗೆ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ

ಉಪ್ಪಿನಂಗಡಿಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗೆ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಹಿಜಾಬ್ ಪ್ರಕರಣದ ವರದಿಗೆ ತೆರಳಿದ ಪತ್ರಕರ್ತರಿಗೆ ದಿಗ್ಬಂಧನ ಹಾಕಿ ವಿಡಿಯೋ ತುಣುಕುಗಳನ್ನು ಡಿಲೀಟ್ ಮಾಡಿದ್ದಲ್ಲದೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.


ಕಾಲೇಜಿಗೆ ಪತ್ರಕರ್ತರು ವಾಸ್ತವ ವರದಿ ಮಾಡಲು ತೆರಳಿದಾಗ ವಿದ್ಯಾರ್ಥಿಗಳು ದುವರ್ತನೆ ತೋರಿಸಿದ್ದಾರೆ. ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೆಗೊಳ್ಕಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರಕಾರ ಪತ್ರಕರ್ತರಿಗೆ ಸೂಕ್ತ ಭದ್ರತೆ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಮತ್ತು ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.


ಘಟನಾವಳಿಗೆ ಸಂಬಂಧಿಸಿದಂತೆ  ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ತಪ್ಪಿತಸ್ಥತರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

0 تعليقات

إرسال تعليق

Post a Comment (0)

أحدث أقدم