ಮಂಗಳೂರು: ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ‘ಮಾನವೀಯತೆಗಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ವಿಶ್ವವಿದ್ಯಾನಿಲಯ ಕಾಲೇಜಿನ ಯೋಗ ವಿಜ್ಞಾನ ವಿಭಾಗದ ಅಧ್ಯಾಪಕರುಗಳಾದ ಉಮಾನಾಥ ಕೆ ಹಾಗೂ ರಂಗಪ್ಪ ಅವರ ಮಾರ್ಗದರ್ಶನದಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ಆಸನ ಹಾಗೂ ಪ್ರಾಣಾಯಾಮಗಳ ಅಭ್ಯಾಸ ಮಾಡಿದರು.
ಎಂ.ಕಾA. ಹಾಗೂ ಎಂ.ಬಿ.ಎ. ಸಂಯೋಜಕ ಡಾ. ಜಗದೀಶ್ ಬಿ. ಮಾತನಾಡಿ, ನಿರಂತರ ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಗಳಿಸಲು ಸಾಧ್ಯ. ದೇಹಸ್ಥಿತಿಗೆ ಅನುಗುಣವಾಗಿ ಯೋಗಾಭ್ಯಾಸ ನಡೆಸುವುದು ಪ್ರತಿಯೊಬ್ಬರಿಗೂ ಒಳ್ಳೆಯದು, ಎಂದರು. ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ಮಾತನಾಡಿ, ಯೋಗಭ್ಯಾಸವೂ ಯೋಗವೇ. ಇಂದಿನ ಒತ್ತಡ ಹಾಗೂ ಚಿಂತೆಯ ಕಾಲಮಾನದಲ್ಲಿ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು ಎಂದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ