ಅಂತರಾಷ್ಟ್ರೀಯ ಯೋಗ ದಿನಾಚರಣೆ; ಆಳ್ವಾಸ್‍ನಲ್ಲಿ ಯೋಗ ಪ್ರಾತ್ಯಕ್ಷಿಕೆ

Chandrashekhara Kulamarva
0



ಮೂಡುಬಿದಿರೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ವಿದ್ಯಾಸಂಸ್ಥೆಗಳ 2,650 ವಿದ್ಯಾರ್ಥಿಗಳು ದಕ್ಷಿಣ ಕನ್ನಡದ ಆಯುಷ್ ಇಲಾಖೆಯ ಸಹಯೋಗದೊಂದಿಗೆ ಬೆಳಿಗ್ಗೆ 6:30 ರಿಂದ 7:30 ರವರೆಗೆ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಯೋಗ ಪ್ರಾತ್ಯಕ್ಷಿಕೆಯನ್ನು ನೀಡಿದರು. 

 

ಕಳೆದ ಒಂದು ವಾರದಿಂದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ವಿದ್ಯಾ ಸಂಸ್ಥೆಗಳ ಜೊತೆಗೆ ಮೂಡುಬಿದಿರೆ ಮತ್ತು ಮಂಗಳೂರು ವಲಯದ ಅನೇಕ ಶಾಲಾ ಕಾಲೇಜು ಮತ್ತು ಸುತ್ತಲಿನ ಸಾರ್ವಜನಿಕರಿಗೆ 35ಕ್ಕೂ ಹೆಚ್ಚು ಕೇಂದ್ರಗಳಲ್ಲಿ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಯೋಗ ತರಬೇತಿಯನ್ನು ನೀಡಿದ್ದರು, ತರಬೇತಿ ಪಡೆದವರು ಏಕಕಾಲಕ್ಕೆ ತಾವಿದ್ದ ಸ್ಥಳಗಳಲ್ಲೇ ಯೋಗ ಪ್ರಾತ್ಯಕ್ಷಿಕೆ ಮಾಡಿದರು. 


ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಗ್ರೀಷ್ಮಾ ವಿವೇಕ್ ಆಳ್ವ, ಆಯುಷ್ ಅಧಿಕಾರಿ ಡಾ. ಶೋಭಾರಾಣಿ, ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲೆ ಡಾ| ವನಿತಾ ಶೆಟ್ಟಿ, ಆಳ್ವಾಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಯತಿಕುಮಾರ್ ಸ್ವಾಮಿ ಗೌಡ, ಅಲೈಡ್ ಹೆಲ್ತ್ ಸೈನ್ಸ್ ಪ್ರಾಂಶುಪಾಲ ಶಂಕರ್ ಶೆಟ್ಟಿ, ಆಳ್ವಾಸ್ ಹೆಲ್ತ್ ಸೆಂಟರ್‍ನ ವೈದ್ಯ ಡಾ. ಹರೀಶ್ ನಾಯಕ್ ಉಪಸ್ಥಿತರಿದ್ದರು.


 ಮೂಡುಬಿದಿರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ದೀಪ ಬೆಳಗಿಸಿ ಯೋಗ ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿದರು


 ಆಳ್ವಾಸ್ ಎಜುಕೇಶನ್ ಫೌಂಡೇಶನ್ ಯೂಟ್ಯೂಬ್ ಪೇಜ್ ಹಾಗೂ ಇತರ ಫೇಸ್ಬುಕ್, ಇನ್‍ಸ್ಟಾಗ್ರಾಂ ಜಾಲತಾಣಗಳಲ್ಲಿ ನೇರಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು. 


 ವಿದ್ಯಾರ್ಥಿಗಳ ಅನುಕೂಲಕ್ಕೆ 60,000 ಚದರ ಅಡಿ ವಿಸ್ತೀರ್ಣದಲ್ಲಿ ಯೋಗ ಮಾಡಲು ರೆಡ್ ಕಾರ್ಪೆಟ್ ಅಳವಡಿಸಲಾಗಿತ್ತು. 


 ಯೋಗ ಪ್ರಾತ್ಯಕ್ಷಿಕೆಯ ಬಳಿಕ ವಿದ್ಯಾರ್ಥಿಗಳಿಗೆ ಹಾಲು, ಬಿಸ್ಕೆಟ್ ಹಾಗೂ ಹಣ್ಣಿನ ವ್ಯವಸ್ಥೆ ಮಾಡಲಾಗಿತ್ತು

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top