ಮಂಗಳೂರು: ಪಾದುವ ಕಾಲೇಜಿನಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ನ ಸಹಭಾಗಿತ್ವದಲ್ಲಿ ಮಂಗಳವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಮುಖ್ಯ ಅತಿಥಿ, ವಿಶ್ವವಿದ್ಯಾನಿಲಯದ ಯೋಗ ವಿಜ್ಞಾನ ವಿಭಾಗದ ಯೋಗ ತರಬೇತುದಾರ ಡಾ. ರಂಗಪ್ಪ, ಯೋಗದ ಹಿನ್ನೆಲೆ ಮತ್ತು ಅದರ ಅಗತ್ಯತೆಯನ್ನು ತಿಳಿಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜನ್ ವಿ. ಎನ್, ಯೋಗದಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳನ್ನು ತಿಳಿಸಿದರು. ವೇದಿಕೆಯಲ್ಲಿ ಯುವ ರೆಡ್ ಕ್ರಾಸ್, ಜೆ ಸಿ ಐ ಮಂಗಳೂರು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ ದೀನತ್ ಡೇಸಾ ಸ್ವಾಗತ ಕೋರಿದರು. ದೈಹಿಕ ಶಿಕ್ಷಣ ನಿರ್ದೇಶಕ ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಡಾ. ರಂಗಪ್ಪ ಅವರ ಮಾರ್ಗದರ್ಶನದಲ್ಲಿ ಸುಮಾರು 1 ಗಂಟೆಗಳ ಕಾಲ ವಿದ್ಯಾರ್ಥಿಗಳು ಯೋಗಾಸನ ಅಭ್ಯಾಸ ನಡೆಸಿದರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ