ಯೋಗ ದಿನಾಚರಣೆ: ಜೂನ್ 21 ರಂದು ಆಳ್ವಾಸ್‍ನಲ್ಲಿ ಬೃಹತ್ ಯೋಗ ಪ್ರಾತ್ಯಕ್ಷಿಕೆ

Upayuktha
0

 



ಮೂಡುಬಿದಿರೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 21 ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ವಿದ್ಯಾಸಂಸ್ಥೆಗಳ ಸುಮಾರು 2,600ಕ್ಕೂ ಅಧಿಕ ವಿದ್ಯಾರ್ಥಿಗಳು ಬೆಳಿಗ್ಗೆ 6:30 ರಿಂದ 7:30 ರವರೆಗೆ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಯೋಗ ಪ್ರಾತ್ಯಕ್ಷಿಕೆಯನ್ನು ನೀಡಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 

 

ಕಳೆದ ಒಂದು ವಾರದಿಂದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ವಿದ್ಯಾ ಸಂಸ್ಥೆಗಳ ಜೊತೆಗೆ ಮೂಡುಬಿದಿರೆ ಮತ್ತು ಮಂಗಳೂರು ವಲಯದ ಅನೇಕ ಶಾಲಾ ಕಾಲೇಜು ಮತ್ತು ಸುತ್ತಲಿನ ಸಾರ್ವಜನಿಕರಿಗೆ 35ಕ್ಕೂ ಹೆಚ್ಚು ಕೇಂದ್ರಗಳಲ್ಲಿ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಯೋಗ ತರಬೇತಿಯನ್ನು ನೀಡುತ್ತಿದ್ದು, ರಾಜ್ಯ ಮತ್ತು ಹೊರರಾಜ್ಯದ ಸಂಘ ಸಂಸ್ಥೆಗಳಿಗೂ ಆಳ್ವಾಸ್ ವಿದ್ಯಾರ್ಥಿಗಳು ಪ್ರತ್ಯಕ್ಷವಾಗಿ ಹಾಗೂ ಅಂತರ್ಜಾಲ ಮೂಲಕ ತರಬೇತಿ ನೀಡುತ್ತಿದ್ದಾರೆ. ಜೂನ್ 21 ರ ಒಳಗಾಗಿ 8 ರಿಂದ 10 ಸಾವಿರಕ್ಕೂ ಹೆಚ್ಚು ಮಂದಿ ಯೋಗ ತರಬೇತಿಯನ್ನು ಪಡೆದು ಯೋಗದ ಮಹತ್ವವನ್ನು ತಿಳಿದುಕೊಳ್ಳಲಿದ್ದಾರೆ.

 

ಜೂನ್ 21 ರಂದು ನಡೆಯುವ ಯೋಗ ಪ್ರಾತ್ಯಕ್ಷಿಕೆಯು ಆಳ್ವಾಸ್ ಎಜುಕೇಶನ್ ಫೌಂಡೇಶನ್ ಯೂಟ್ಯೂಬ್ ಪೇಜ್ ಹಾಗೂ  ಇತರ ಫೇಸ್ಬುಕ್, ಇನ್‍ಸ್ಟಾಗ್ರಾಂ ಜಾಲತಾಣಗಳಲ್ಲಿ ನೇರಪ್ರಸಾರವಾಗಲಿದೆ. ದಕ್ಷಿಣ ಕನ್ನಡದ ಆಯುಷ್ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮ ಜರುಗುತ್ತಿದೆ ಎಂದು ತಿಳಿಸಿದರು. 

 

ಕಳೆದ ಎರಡೂವರೆ ವರ್ಷಗಳಿಂದ ಪ್ರತಿದಿನ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಸುಮಾರು 3,500 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನಿರಂತರವಾಗಿ ಪ್ರಾಣಾಯಾಮ ಮತ್ತು ಧ್ಯಾನದ ತರಬೇತಿಯನ್ನು ನೀಡುತ್ತಾ ಬರಲಾಗುತ್ತಿದೆ.

 

ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲೆ ಡಾ| ವನಿತಾ ಶೆಟ್ಟಿ, ಪ್ರಾಧ್ಯಪಕಿ ಡಾ| ಅರ್ಚನಾ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top