ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಬೆಳಗ್ಗೆ 11:30ಕ್ಕೆ ಪ್ರಕಟ

Upayuktha
0



ಬೆಂಗಳೂರು:  ದ್ವಿತೀಯ ಪಿಯುಸಿ ಫಲಿತಾಂಶ ನಾಳೆ (ಜೂನ್ 18ರಂದು) ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಟ್ವೀಟ್ ಮಾಡಿದ್ದಾರೆ.


ಫಲಿತಾಂಶವನ್ನು ಸಚಿವರು ನಾಳೆ ಬೆಳಗ್ಗೆ ಪದವಿಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಾಳೆ ಬೆಳಗ್ಗೆ 11:30ಕ್ಕೆ ಪ್ರಕಟಿಸಲಿದ್ದಾರೆ. ಫಲಿತಾಂಶ ತಿಳಿಯಲು www.karresults.nic.In ನ್ನು ವೀಕ್ಸಿಸಿ.


ಈ ಬಾರಿ ಏಪ್ರಿಲ್‌ 22ರಿಂದ ಮೇ 18ರ ವರೆಗೆ ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಒಟ್ಟು 6.84,255 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆದಿದ್ದರು.


ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಫಲಿತಾಂಶವನ್ನು ನೋಡಬಹುದಾಗಿದೆ.



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top