ಪ್ರತಿಫಲ ಬಯಸದ ಸೇವೆ ಎನ್ನೆಸ್ಸೆಸ್‌ ಧ್ಯೇಯ: ಡಾ. ವೆಂಕಟೇಶ ಎಚ್‌.ಕೆ

Upayuktha
0


ಉಡುಪಿ: ಜೀವನದಲ್ಲಿ ಸಿಹಿ-ಕಹಿ ಅನುಭವಗಳು ಸರ್ವೇಸಾಮಾನ್ಯ. ಕಹಿ ಅನುಭವಗಳನ್ನು ಮರೆತು, ಸಿಹಿ ಅನುಭವಗಳನ್ನು ಮೆಲುಕು ಹಾಕುತ್ತಾ ಸಾಗುವುದೇ ಜೀವನ. ಅಂತಹ ಸಿಹಿ-ಕಹಿ ಅನುಭವ‌ಗಳ ಸಮ್ಮಿಲನವೇ ಎನ್‌.ಎಸ್‌.ಎಸ್‌ನ ವಾರ್ಷಿಕ ವಿಶೇಷ ಶಿಬಿರ. ಪ್ರತಿಫ‌ಲ ಬಯಸದೆ ಸೇವೆಯನ್ನು ಮಾಡುತ್ತಾ ಖುಷಿಯಿಂದ ಕಳೆದ ಆ ಆರು ದಿನಗಳ ಪ್ರತಿಯೊಂದು ಕ್ಷಣವು ಅವಿಸ್ಮರಣೀಯ ಎಂದು ಸರಕಾರಿ ಪ್ರ‌ಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ ಎಚ್.ಕೆ ಹೇಳಿದರು.


ಅವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಎನ್.ಎನ್.ಎಸ್ ನ ಅನುಭವದ ಬಗ್ಗೆ ‌ಮಾತನಾಡುತ್ತಿದ್ದರು.


ರಾಷ್ಟ್ರೀಯ ಸೇವಾ ಯೋಜನೆಯ ಮೂಲ ಧ್ಯೇಯವೆಂದರೆ, ಮಕ್ಕಳು ನಾಲ್ಕು ಗೋಡೆಗಳ ನಡುವೆ ಪಾಠ ಕಲಿಯುವುದರ ಜತೆಗೆ, ಸಮುದಾಯದ ಜನರೊಂದಿಗೆ ಬೆರೆತು, ಅವರ ನೋವು-ನಲಿವು, ಸುಖ-ದುಃಖ, ಕಷ್ಟ-ಕಾರ್ಪಣ್ಯಗಳಲ್ಲಿ ಪಾಲುಗೊಳ್ಳುವುದಾಗಿದೆ. ಆ ಮೂಲಕ ಸಮಾಜದ, ದೇಶದ ಮತ್ತು ವೈಯಕ್ತಿಕ ಬೆಳೆವಣಿಗೆಯನ್ನು ಪೂರೈಸಿಕೊಳ್ಳುವುದು ಎಂಬುದಾಗಿದೆ. ಎನ್‍ಎಸ್‍ಎಸ್ ಮುಖಾಂತರ ವಿದ್ಯಾರ್ಥಿಗಳು ಮತ್ತು ಸಮುದಾಯದ ಜನರು ಒಂದೆಡೆ ಸೇರಿ ಒಂದೇ ವೇದಿಕೆಯಲ್ಲಿ ತಮ್ಮಲ್ಲಿ ಹುದುಗಿರುವ ಸೂಕ್ತ ಪ್ರತಿಭೆಗಳನ್ನು ಹೊರಹೊಮ್ಮಿಸಲು ಸಹಾಯ ಮಾಡಿ ಆ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಕಲ್ಪಿಸುವುದು ಎಂದು ಅವರು ಅಭಿಪ್ರಾಯ ಪಟ್ಟರು. ಕಾರ್ಯಕ್ರಮದ ಅಧ್ಯಕ್ಷರಾಗಿ ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಾಜ್ ಕುಮಾರ್ ಭಾಗವಹಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top