ಬದುಕಿನ ಯಶಸ್ಸಿಗೆ ಜೀವನ ಕೌಶಲ್ಯಗಳು: ಜ್ಯೋತಿ ಪ್ರಶಾಂತ್

Upayuktha
0


ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗರಡಿಮಜಲು ಇಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬದುಕಿನ ಯಶಸ್ಸಿಗೆ ಜೀವನ ಕೌಶಲ್ಯಗಳು ಎಂಬ ವಿಷಯದ ಕುರಿತಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿಯ ಮಾನವ ಸಂಪನ್ಮೂಲ ಸಲಹೆಗಾರರು ಮತ್ತು ಜೀವನ ಕೌಶಲ್ಯ ತರಬೇತುದಾರರಾದ ಶ್ರೀಮತಿ ಜ್ಯೋತಿ ಪ್ರಶಾಂತ್ ಮಾತನಾಡಿ, “ಪ್ರಸ್ತುತ ಜನರ ಆಧುನಿಕ ಬದುಕು ಯಾಂತ್ರಿಕವಾಗಿದ್ದು, ಜೀವನದ ಮೌಲ್ಯಗಳನ್ನು ಕಳೆದುಕೊಂಡು, ಮನುಷ್ಯ ದೈಗಿಕವಾಗಿ ತೊಂದರೆ ಪಡುವುದಕ್ಕಿಂತ ಮಾನಸಿಕವಾಗಿ ತೊಂದರೆಗಳನ್ನು ಅನುಭವಿಸುತ್ತಾನೆ. ಈ ನಿಟ್ಟಿನಲ್ಲಿ ತಮ್ಮ ನಕಾರಾತ್ಮಕ ಭಾವನೆಗಳನ್ನು ಹತೋಟಿಯಿಂದ ಜೀವಿಸುವುದು ಅಗತ್ಯವಾಗಿದೆ” ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಗೋಪಾಲಕೃಷ್ಣ ಎಂ. ಗಾಂವ್ಕರ್ ವಹಿಸಿದ್ದು- “ಉತ್ತಮ ಹವ್ಯಾಸ ಮತ್ತು ಆದರ್ಶಗಳನ್ನು ಅಭ್ಯಸಿಸಿ ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ತಮ್ಮ ದೈನಂದಿನ ಬದುಕಿನಲ್ಲಿ ಸಂಭವಿಸುವ ವಾಸ್ತವ ಅಂಶಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಲು ತಮ್ಮ ದೃಷ್ಟಿಕೋನವನ್ನು ಬದಲಾಯಿಸಿದಲ್ಲಿ ಪ್ರತಿಯೊಬ್ಬರ ನೆಮ್ಮದಿ ಜೀವನಕ್ಕೆ ನಾಂದಿಯಾಗವಹುದು ಎಂದು ಹೇಳಿದರು.


ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಜಿ, ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಶ್ರೀಮತಿ ಸುಷ್ಮಾ ಟಿ. ಹಾಗೂ ಡಾ. ಮಹೇಶ್ ಕುಮಾರ್ ಕೆ.ಇ. ಉಪಸ್ಥಿತರಿದ್ದರು. ಶಿಬಿರಾರ್ಥಿ ಶ್ರಾವ್ಯ  ಸ್ವಾಗತಿಸಿ, ಕೀರ್ತನಾ ವಂದಿಸಿದರು. ಚೈತ್ರಾ ನಿರೂಪಿಸಿದರು. 

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top